Monday, May 6, 2024
Homeಜಿಲ್ಲಾ ಸುದ್ದಿಗಳುಸಾರಿಗೆ ಬಸ್-ಬೈಕ್‍ ನಡುವೆ ಭೀಕರ ಅಪಘಾತ, ಸವಾರರಿಬ್ಬರು ಸ್ಥಳದಲ್ಲೇ ಸಾವು

ಸಾರಿಗೆ ಬಸ್-ಬೈಕ್‍ ನಡುವೆ ಭೀಕರ ಅಪಘಾತ, ಸವಾರರಿಬ್ಬರು ಸ್ಥಳದಲ್ಲೇ ಸಾವು

ಹಾಸನ,ಏ.24- ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ಹೊತ್ತಿ ಉರಿದಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ತಿಪಟೂರು ತಾಲ್ಲೂಕಿನ, ಬಿದರೆಕೆರೆ ಗ್ರಾಮದ ನಿವಾಸಿಗಳಾದ ರೇಣುಕಪ್ಪ ಮತ್ತು ರವೀಶ ಮೃತ ದುರ್ದೈವಿಗಳು.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಚಿಕ್ಕಮಗಳೂರು ಘಟಕದ ಸಾರಿಗೆ ಬಸ್ ಮುಂದೆ ಹೋಗುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‍ನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಪಘಾತದ ನಂತರ ಬಸ್‍ಗೆ ಬೆಂಕಿ ಹೊತ್ತಿಕೊಂಡಿತು. ಕೂಡಲೇ ರಸ್ತೆಯಲ್ಲೇ ಬಸ್ ನಿಲ್ಲಿಸಿದ ಚಾಲಕ ಪ್ರಯಾಣಿಕರನ್ನು ತುರ್ತಾಗಿ ಕೆಳಗಿಳಿಸಿದ್ದು, ಅದೃಷ್ಟವಶಾತ್ ಬಸ್‍ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.

ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

RELATED ARTICLES

Latest News