Tuesday, July 23, 2024
Homeಜಿಲ್ಲಾ ಸುದ್ದಿಗಳುಭೀಕರ ಅಪಘಾತ : ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿನಿ ಸಾವು

ಭೀಕರ ಅಪಘಾತ : ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿನಿ ಸಾವು

ಚಿಕ್ಕಬಳ್ಳಾಪುರ,ಜು.10- ತನ್ನ ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿನಿಯೊಬ್ಬಳು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಂದಿಗಿರಿಧಾಮ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದ ರಕ್ಷಿತ ಮೃತ ವಿದ್ಯಾರ್ಥಿನಿ.

ಬೆಂಗಳೂರಿನ ನಿಟ್ಟೆಮೀನಾಕ್ಷಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ರಕ್ಷಿತ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಾರಿನಲ್ಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ನಾಗಾರ್ಜುನ ಕಾಲೇಜಿನ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಅಪ್ಪಳಿಸಿ ಉರುಳಿಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಅಪಘಾತವಾದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ತನ್ನ ಹುಟ್ಟುಹಬ್ಬವನ್ನು ಕುಟುಂಬ ಸದಸ್ಯರೊಂದಿಗೆ ಆಚರಿಸಿಕೊಳ್ಳಬೇಕೆಂದು ಗ್ರಾಮಕ್ಕೆ ಖುಷಿಯಿಂದ ಬರುತ್ತಿದ್ದ ಆಕೆಯ ಸಂತೋಷವನ್ನು ಜವರಾಯ ಕಸಿದುಕೊಂಡಿದ್ದಾನೆ.

ಆಕ್ರಂದನ :
ಮಗಳನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದ್ದು, ಹುಟ್ಟುಹಬ್ಬದ ದಿನವೇ ಈ ಘೋರ ಘಟನೆ ನಡೆದಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿತ್ತು.ಈ ಸಂಬಂಧ ನಂದಗಿರಿಧಾಮ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News