Thursday, December 7, 2023
Homeರಾಷ್ಟ್ರೀಯಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನ ಹತ್ಯೆ

ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನ ಹತ್ಯೆ

ಶ್ರೀನಗರ,ನ.9- ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‍ನ ಕಥೋಹಾಲನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್‍ಫ್ರಂಟ್‍ನೊಂದಿಗೆ (ಟಿಆರ್‍ಎಫ್) ಸಂಪರ್ಕ ಹೊಂದಿದ್ದ ಭಯೋತ್ಪಾದಕನೊಬ್ಬ ಸಾವನ್ನಪ್ಪಿದ್ದಾನೆ. ಹತ್ಯೆಗೀಡಾದ ಭಯೋತ್ಪಾದಕನನ್ನು ಮೈಸರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ.

ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‍ಎಫ್) ನೊಂದಿಗೆ ಸಂಬಂಧ ಹೊಂದಿದ್ದನು ಎಂದು ಕಾಶ್ಮೀರ ವಲಯ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‍ಐ ವರದಿ ಮಾಡಿದೆ. ಹತ್ಯೆಯಾದ ಭಯೋತ್ಪಾದಕನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇನ್ನಿತರ ಭಯೋತ್ಪಾದನೆ ನಡೆಸಲು ಸಂಚು ರೂಪಿಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂಬ ಮಾಹಿತಿಯನ್ನು ಅಧಿಕಾರಿ ನೀಡಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಲನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಮೊದಲು ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು, ಬಳಿಕ ನಡೆದ ಪ್ರತಿದಾಳಿಯಲ್ಲಿ ಓರ್ವ ಉಗ್ರನನ್ನು ಸದೆಬಡಿಯಲಾಗಿದೆ.

ವಾಯಮಾಲಿನ್ಯ ತಡೆಗಟ್ಟಲು ನ.20 ರಂದು ನವದೆಹಲಿಯಲ್ಲಿ ಕೃತಕ ಮಳೆ

ಪ್ರತ್ಯೇಕ ಘಟನೆಯಲ್ಲಿ ಇಂದು ಮುಂಜಾನೆ ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್‍ನಲ್ಲಿ ಅಂತಾರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಪಾಕಿಸ್ತಾನಿ ರೇಂಜರ್‍ಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಸೇನಾ ಸಿಬ್ಬಂದಿ ತೀವ್ರ ಕಟ್ಟೆಚ್ಚರವಹಿಸಿದ್ದಾರೆ.

ಅಕ್ಟೋಬರ್ 30ರಿಂದ ಸತತ ಮೂರು ದಿನಗಳಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.

RELATED ARTICLES

Latest News