Wednesday, April 2, 2025
Homeಜಿಲ್ಲಾ ಸುದ್ದಿಗಳು | District Newsಸಿಡಿಲು ಬಡಿದು ಸಹೋದರರ ದುರರ್ಮಣ

ಸಿಡಿಲು ಬಡಿದು ಸಹೋದರರ ದುರರ್ಮಣ

ಭದ್ರಾವತಿ, ನ.29- ಸಿಡಿಲು ಬಡಿದು ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಬಳಿ ರಾತ್ರಿ ನಡೆದಿದೆ.ಬೀರು (33) ಸುರೇಶ್ (30) ಮೃತಪಟ್ಟ ಸಹೋದರರು.

ತಮ್ಮ ಗದ್ದೆಯಲ್ಲಿ ಭತ್ತ ಬೆಳೆದಿದ್ದು, ಕಟಾವು ಮಾಡಿ ಒಕ್ಕಣೆಗೆ ಹಾಕಲಾಗಿತ್ತು. ಭತ್ತ ಕಾಯಲು ರಾತ್ರಿ ಇಬ್ಬರು ಜಮೀನು ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ..?

ಕುಟುಂಬಕ್ಕೆ ಆಧಾರವಾಗಿದ್ದ ಮಕ್ಕಳು ಈ ರೀತಿ ಸಾವನ್ನಪ್ಪಿರುವುದು ಪೋಷಕರಿಗೆ ಭಾರೀ ಆಘಾತ ತಂದಿದೆ. ಇನ್ನು ನಮ್ಮ ಕುಟುಂಬಕ್ಕೆ ದಿಕ್ಕು ಯಾರು ಎಂದು ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿತ್ತು. ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News