Thursday, December 5, 2024
Homeಜಿಲ್ಲಾ ಸುದ್ದಿಗಳು | District Newsತುಮಕೂರು | Tumakuruಒಂದೇ ದಿನದಲ್ಲಿ ಉದ್ಯೋಗ ನೀಡಿ 'ಅನುಕಂಪ' ತೋರಿದ ಜಿಲ್ಲಾಧಿಕಾರಿ

ಒಂದೇ ದಿನದಲ್ಲಿ ಉದ್ಯೋಗ ನೀಡಿ ‘ಅನುಕಂಪ’ ತೋರಿದ ಜಿಲ್ಲಾಧಿಕಾರಿ

Tumakuru

ತುಮಕೂರು, ನ.20- ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕೂಡಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಮಾನವೀಯತೆ ಮೆರೆದಿದ್ದಾರೆ.

ತುರುವೇಕೆರೆ ತಾಲೂಕಿನ ಡಿ ಕಲ್ಕೆರೆಯ ಪರಮೇಶ್ವರ್‌ ಎಂಬುವವರು ಅಗ್ನಿಶಾಮಕ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕರ್ತವ್ಯ ಮುಗಿಸಿ ಮನೆಗೆ ಬರುವಾಗ 2023ರಲ್ಲಿ ಅಪಘಾತದಲ್ಲಿ ಮೃತರಾಗಿದ್ದರು.

ಈ ಪ್ರಕರಣ ಇಲಾಖೆ ಹಂತದಲ್ಲಿ ಇತ್ಯರ್ಥವಾಗಿ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಆದೇಶವಾಗಿತ್ತು. ತಕ್ಷಣ ಜಿಲ್ಲಾಧಿಕಾರಿಗಳು ತಮ ಸಿಬ್ಬಂದಿ ಮೂಲಕ ಮೃತ ಪರವೇಶ್ವರ್‌ ಅವರ ಪತ್ನಿ ರೋಹಿಣಿ ಅವರನ್ನು ಕಚೇರಿಗೆ ಕರೆದು ಮಾತನಾಡಿಸಿದರು.

ಮೂರು ವರ್ಷದ ಮಗು ಹಾಗೂ ಅತ್ತೆಯೊಂದಿಗೆ ಬಂದಿದ್ದ ರೋಹಿಣಿ ಅವರನ್ನು ತಮ ಕಚೇರಿಯಲ್ಲೇ ಕೂರಿಸಿ ಕೇವಲ ಅರ್ಧ ತಾಸಿನಲ್ಲಿ ಅನುಕಂಪದ ಉದ್ಯೋಗದ ನೇಮಕಾತಿ ಆದೇಶವನ್ನು ಸಂತ್ರಸ್ತ ಮಹಿಳೆಗೆ ನೀಡಿದರು. ಕುಣಿಗಲ್‌ ತಾಲೂಕಿನಲ್ಲಿ ಡಿ ವರ್ಗದ ನೌಕರರಾಗಿ ನೇಮಕಾತಿಗೆ ಆದೇಶಿಸಿ ರೋಹಿಣಿಯವರಿಗೆ ಆದೇಶ ಪತ್ರ ನೀಡಿದರು.

RELATED ARTICLES

Latest News