Saturday, July 20, 2024
Homeಮನರಂಜನೆಈ ವಾರ " ಜಡ್ಜ್‌ಮೆಂಟ್" ನೀಡಲು ಬರುತ್ತಿದ್ದಾರೆ ಕ್ರೇಜಿಸ್ಟಾರ್‌

ಈ ವಾರ ” ಜಡ್ಜ್‌ಮೆಂಟ್” ನೀಡಲು ಬರುತ್ತಿದ್ದಾರೆ ಕ್ರೇಜಿಸ್ಟಾರ್‌

ಕ್ರೇಜಿಸ್ಟಾರ್‌ ವಿ. ರವಿಚಂದ್ರನ್‌ ಪ್ರಮುಖ ಪಾತ್ರದಲ್ಲಿ ನಟಿಸಿರುವ ದಿ ಜ್ಜ್‌‍ಮೆಂಟ್‌‍ ಚಿತ್ರ ಈ ವಾರ ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತಾಗಿ ಚಿತ್ರ ತಂಡ ಇತ್ತೀಚಿಗೆ ಟ್ರೇಲರ್‌ ಲಾಂಚ್‌ ಕಾರ್ಯಕ್ರಮದ ಮೂಲಕ ಮಾಹಿತಿ ಹಂಚಿಕೊಂಡಿತು. ಜಿ9 ಕಮ್ಯುನಿಕೇಶನ್‌ ಮೀಡಿಯಾ ಅಂಡ್‌ ಎಂಟರ್‌ಟೈನ್‌ಮೆಂಟ್‌ ಅಡಿ ಈ ಚಿತ್ರ ನಿರ್ಮಾಣವಾಗಿದೆ.

ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, ಇದು ರವಿಚಂದ್ರನ್‌ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್‌ ಥ್ರಿಲ್ಲರ್‌ ಜಾನರ್‌ನ ಚಿತ್ರ. ಯದ್ಧಕಾಂಡ ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್‌ ಅವರ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ ಚಿತ್ರದಲ್ಲಿ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್‌, ಧನ್ಯ, ಮೇಘನಾ ಗಾಂವ್ಕರ್‌, ರಂಗಾಯಣ ರಘು, ಪ್ರಕಾಶ್‌ ಬೆಳವಾಡಿ ಅವರನ್ನು ಒಳಗೊಂಡ ಬಹು ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಕರ್ನಾಟಕ ಮಾತ್ರವಲ್ಲದೆ, ಡೆಲ್ಲಿ, ಮುಂಬೈ, ಲಕ್ನೋ, ಗೋವಾ, ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧ ಕಡೆ ಪ್ರತಿಷ್ಠಿತ ರಿಲಯ್ಸ್‌‍ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ ಮೂಲಕ ಬಿಡುಗಡೆಯಾಗಲಿದೆ ಎಂದರು.

ನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಲು ಒಪ್ಪಿಕೊಂಡೆ. ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ. ಸಾಮಾನ್ಯವಾಗಿ ನನ್ನ ಸಿನಿಮಾ ಹಾಡುಗಳ ಮೂಲಕ ಜನಪ್ರಿಯ. ಆದರೆ ನನಗೆ ಈ ಚಿತ್ರದಲ್ಲಿ ಒಂದು ಹಾಡೂ ಇಲ್ಲ. ಈ ಚಿತ್ರದ ಹೆಸರು ಜ್ಜ್‌‍ಮೆಂಟ್‌‍. ಆದರೆ ನಮ್ಮ ಸಿನಮಾ ನೋಡಿ ಪ್ರೇಕ್ಷಕ ನೀಡುವ ಜ್ಜ್‌‍ಮೆಂಟ್‌ ಅಂತಿಮ ಎನ್ನುತ್ತಾರೆ ನಟ ರವಿಚಂದ್ರನ್‌.

RELATED ARTICLES

Latest News