ಬೆಳಗಾವಿ, ಡಿ. 15- ಮುಖ್ಯಮಂತ್ರಿ ಅಥವಾ ಮಂತ್ರಿಯಾದರೆ ಮಾತ್ರ ಕ್ಷೇತ್ರ ಅಭಿವೃದ್ಧಿಯಾಗುವುದಾದರೆ ನನ್ನನ್ನೂ ಮಂತ್ರಿ ಮಾಡಿ ಎಂದು ಆಡಳಿತ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ಬೇಡಿಕೆ ಮಂಡಿಸಿದರು. ಪ್ರಶ್ನೋತ್ತರದ ಅವಧಿಯಲ್ಲಿ ರಾಣೆಬೆನ್ನೂರು ಕ್ಷೇತ್ರದ ಶಾಸಕ ಪ್ರಕಾಶ್ ಕೋಳಿವಾಡ, ತಮ್ಮ ಕ್ಷೇತ್ರದಲ್ಲಿ ಅಡಿಕೆ ಬೆಳೆಗಳು ಅಗತ್ಯ ಬೆಂಬಲ ಮತ್ತು ಪೊ್ರೀತ್ಸಾಹ ದೊರೆಯದೆ ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ನೆರೆಯ ಕ್ಷೇತ್ರವಾಗಿರುವ ಚನ್ನಗಿರಿ ಮತ್ತು ಶಿಗ್ಗಾವು ಕ್ಷೇತ್ರದಲ್ಲಿ ಅಡಿಕೆ ಬೆಳೆಗೆ ಹನಿ ನೀರಾವರಿ, ರಸಗೊಬ್ಬರ, ರಾಸಾಯನಿಕ ಸಿಂಪಡಣೆ ಸೇರಿದಂತೆ ವಿವಿಧ ಸೌಲಭ್ಯಗಳು, ಮಾರುಕಟ್ಟೆ ವ್ಯವಸ್ಥೆ ಎಲ್ಲವೂ ದೊರೆಯುತ್ತಿದೆ ಎಂದು ಹೇಳಿದರು.
ಶಿಗ್ಗಾವಿಗೆ ಹೊಂದಿಕೊಂಡಿರುವ ತಮ್ಮ ಕ್ಷೇತ್ರ ಬಯಲು ಪ್ರದೇಶವಾಗಿರುವುದರಿಂದ ಅಡಿಗೆ ಬೆಳೆಯಲು ತೋಟಗಾರಿಕೆ ಇಲಾಖೆಯಿಂದ ಪೊ್ರೀತ್ಸಾಹ ದೊರೆಯುವುದಿಲ್ಲ ಎಂದು ಸಚಿವರು ಉತ್ತರಿಸಿದ್ದಾರೆ. ಶಿಗ್ಗಾವು ಕ್ಷೇತ್ರದ ಶಾಸಕರಾದ ಬಸವರಾಜು ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು ಎಂಬ ಕಾರಣಕ್ಕೆ ಎಲ್ಲಾ ಸೌಲಭ್ಯಗಳನ್ನೂ ನೀಡಲಾಗುತ್ತಿದೆ. ಜನರಿಗೆ ಅನುಕೂಲ ಮಾಡಿಕೊಡಲು ಮುಖ್ಯಮಂತ್ರಿ ಅಥವಾ ಸಚಿವರೇ ಆಗಬೇಕೆಂದಾದರೆ ನನ್ನನ್ನೂ ಮಂತ್ರಿ ಮಾಡಿ ಎಂದು ಒತ್ತಾಯಿಸಿದರು.
ಭದ್ರತಾ ಲೋಪದ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಲೋಕಸಭೆಯಲ್ಲಿ ಕೋಲಾಹಲ
ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪರವಾಗಿ ಉತ್ತರ ನೀಡಿದಂತಹ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಂತಹ ಪ್ರದೇಶಗಳಲ್ಲಿ ಅಡಿಕೆ ಬೆಳೆಯಲು ಪೊ್ರೀತ್ಸಾಹ ದೊರೆಯುತ್ತಿದೆ. ಬಯಲು ಸೀಮೆಯ ಪ್ರದೇಶಗಳಿಗೆ ಇಲಾಖೆಯ ಆರ್ಥಿಕ ಬೆಂಬಲ ದೊರೆಯುವುದಿಲ್ಲ ಎಂದು ಹೇಳಿದರು.
ಈ ವೇಳೆ ಬಿಜೆಪಿಯ ಅರಗಜ್ಞಾನೇಂದ್ರ ತಮ್ಮನ್ನು ಸಚಿವರನ್ನಾಗಿ ಮಾಡಿ ಎಂದು ಶಾಸಕರು ಕೇಳಿದ್ದಾರೆ. ಅದಕ್ಕೆ ಸರಿಯಾದ ಉತ್ತರ ಸಿಕ್ಕಿಲ್ಲ ಎಂದು ಕಾಲೆಳೆದರು.ಶಾಸಕರ ಬೇಡಿಕೆಯನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರುವುದಾಗಿ ಎಂ.ಸಿ.ಸುಧಾಕರ್ ಭರವಸೆ ನೀಡಿದರು.
ಕೃಷಿ ಮಾರುಕಟ್ಟೆ ಸಚಿವರೂ ಆಗಿರುವ ಶಿವಾನಂದ ಪಾಟೀಲ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಮೂರು ತಾಲೂಕಿನಲ್ಲಿ ಅಡಿಕೆ ಬೆಳೆಯಲು ಅವಕಾಶ ಕಲ್ಪಿಸಲಾಗಿದೆ. ರಾಣೆಬೆನ್ನೂರು, ಹಾನಗಲ್ ತಾಲೂಕುಗಳನ್ನು ಅಡಿಕೆ ಬೆಳೆಗೆ ಪೊ್ರೀತ್ಸಾಹ ನೀಡುವ ಯೋಜನೆಗಳಿಗೊಳಪಡಿಸಲು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಒಪ್ಪುವುದಿಲ್ಲ ಎಂದು ಹೇಳಿದರು.
ವಿಧಾನಸಭೆಯ ಉಪಾಧ್ಯಕ್ಷರಾದ ರುದ್ರಪ್ಪ ಲಮಾಣಿ ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಅಡಿಕೆ ಬೆಳೆಗಳಿಗೆ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು.ಹಾಸನ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಕೂಡ ತಮ್ಮ ಕ್ಷೇತ್ರಕ್ಕೂ ಪೊ್ರೀತ್ಸಾಹಕ ಯೋಜನೆಗಳನ್ನು ನೀಡಬೇಕೆಂದು ಒತ್ತಾಯಿಸಿದರು.