ಮೋಜು- ಮಸ್ತಿಗಾಗಿ ಕಳವು : ಆರೋಪಿ ಸೆರೆ, 14 ದ್ವಿಚಕ್ರ ವಾಹನಗಳ ವಶ

Social Share

ಬೆಂಗಳೂರು, ಜು.27- ದ್ವಿಚಕ್ರ ವಾಹನಗಳನ್ನು ಕದ್ದು ಅವುಗಳನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಆರೋಪಿಯೊಬ್ಬನನ್ನು ವಿದ್ಯಾರಣ್ಯ ಪುರ ಠಾಣೆ ಪೊಲೀಸರು ಬಂಧಿಸಿ 11 ಲಕ್ಷ ರೂ. ಬೆಲೆ ಬಾಳುವ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂಲತಃ ಚಿಕ್ಕಬಳ್ಳಾಪುರದ ಕಿಶನ್ ಚೌದರಿ(21) ಬಂಧಿತ ಆರೋಪಿ. ಈತ ನಗರದ ವಿದ್ಯಾರಣ್ಯಪುರ ಮುಖ್ಯರಸ್ತೆಯ ಯು.ಎನ್. ಪೀಜಿಯಲ್ಲಿ ವಾಸವಾಗಿದ್ದನು. ಈತನ ಬಂಧನದಿಂದ 13 ಪ್ರಕರಣಗಳು ಬೆಳಕಿಗೆ ಬಂದಿವೆ.

ಆರ್ಕೆಡ್ ಲೇಔಟ್ ನಿವಾಸಿ ವೆಂಕಟೇಶ್ ಎಂಬುವರು ಜು.9ರಂದು ರಾತ್ರಿ 9 ಗಂಟೆ ವೇಳೆಯಲ್ಲಿ ತಮ್ಮ ದ್ವಿ-ಚಕ್ರ ವಾಹನವನ್ನು ಮನೆಯ ಗೇಟ್ ಒಳಗೆ ನಿಲ್ಲಿಸಿದ್ದರು. ಎರಡು ದಿನದ ನಂತರ ನೋಡಿದಾಗ ದ್ವಿಚಕ್ರ ವಾಹನ ನಾಪತ್ತೆಯಾಗಿತ್ತು. ಈ ಬಗ್ಗೆ ಅವರು ವಿದ್ಯಾರಣ್ಯ ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ 11 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಬಂಧನದಿಂದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ 4 ಪ್ರಕರಣ, ಯಶವಂತಪುರ ಪೊಲೀಸ್ ಠಾಣೆಯ 2 ಪ್ರಕರಣ, ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯ 2, ಅಮೃತಹಳ್ಳಿ ಪೊಲೀಸ್ ಠಾಣೆ, ಬಾಗಲೂರು, ಚಿಕ್ಕಜಲ, ಸುಬ್ರಮಣ್ಯನಗರ, ಸೂಲದೇವನಹಳ್ಳಿ ಪೊಲೀಸ್ ಠಾಣೆಯ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿರುತ್ತದೆ.

ಯಲಹಂಕ ಉಪವಿಭಾಗದ ಎಸಿಪಿ ಮನೋಜ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಇನ್‍ಸ್ಪೆಕ್ಟರ್ ಅನಿಲ್ ಕುಮಾರ್ ಅವರನ್ನೊಳಗೊಂಡ ಸಿಬ್ಬಂದಿ ತಂಡ ಆರೋಪಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ.

Articles You Might Like

Share This Article