Sunday, November 24, 2024
Homeರಾಜಕೀಯ | Politicsಕಾಂಗ್ರೆಸ್‌‍ನಿಂದ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಹುನ್ನಾರ ನಡೆದಿದೆ : ಕೋಟಾ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್‌‍ನಿಂದ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಹುನ್ನಾರ ನಡೆದಿದೆ : ಕೋಟಾ ಶ್ರೀನಿವಾಸ ಪೂಜಾರಿ

Kota Srinivas Poojary

ಚಿಕ್ಕಮಗಳೂರು,ಸೆ.22– ಗೃಹಲಕ್ಷಿ ಯೋಜನೆಗೆ ಹಣ ಹೊಂದಿಸಲು ರಾಜ್ಯದ ಕಾಂಗ್ರೆಸ್‌‍ ಸರ್ಕಾರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸುವ ಹುನ್ನಾರ ನಡೆಸಿದ್ದು, ಬಿಜೆಪಿ ಕಾರ್ಯಕರ್ತರು ಇದನ್ನು ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಸಂಬಂಧ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 50,000 ಬಿಪಿಎಲ್‌ ಕಾರ್ಡುಗಳು ರದ್ದಾಗುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರ ಸಮೀಕ್ಷೆ ಸಹ ನಡೆಸುತ್ತಿದೆ ಎಂದರು.

ಸಾವಿರಾರು ಬಡ ಜನರಿಗೆ ತೊಂದರೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮಹಿಳಾ ಮೋರ್ಚ ಅಥವಾ ಬೇರೆ ಯಾವುದಾದರೂ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಬಡವರ ಪಡಿತರ ಚೀಟಿಗಳನ್ನು ರದ್ದುಪಡಿಸಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಬೇಕು ಎಂದು ಹೇಳಿದರು.

ಇದರಿಂದ ಕನಿಷ್ಠಪಕ್ಷ ಬಿಪಿಎಲ್‌ ಕಾರ್ಡುಗಳಿಗೆ ಸ್ವಲ್ಪಮಟ್ಟಿನ ರಿಯಾಯಿತಿಯಾದರೂ ಸಿಗಬಹುದು. ಬಡವರಿಗೆ ಅನುಕೂಲವಾಗಬಹುದು ಎಂದರು. ಇಡೀ ದೇಶದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ನಮ ನಮ ಬೂತ್‌ ಗಳಲ್ಲಿ ಅಭಿಯಾನಕ್ಕೆ ವೇಗ ನೀಡಬೇಕು. ಕೆಲವೆಡೆ ತುಂಬಾ ಚೆನ್ನಾಗಿ ನಡೆದಿದೆ. ಪ್ರಮುಖವಾಗಿ ಮಹಾಶಕ್ತಿ ಕೇಂದ್ರಗಳು, ಮಂಡಲಗಳಲ್ಲಿ ಇನ್ನಷ್ಟು ಚುರುಕಾಗಿ ಸದಸ್ಯತ್ವ ಅಭಿಯಾನ ನಡೆಯಬೇಕಿದೆ ಎಂದು ಕರೆ ನೀಡಿದರು.

ಮಂಡಲಗಳು ಮತ್ತು ಶಕ್ತಿ ಕೇಂದ್ರದ ನಿಜವಾದ ಶಕ್ತಿಯ ಅರವಿಗೆ ಬರುವುದೇ ಸದಸ್ಯತ್ವ ನೊಂದಣಿಯ ಆಧಾರದ ಮೇಲೆ. ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಮೋರ್ಚಾಗಳು ಜವಾಬ್ದಾರಿಯನ್ನು ತೆಗೆದುಕೊಂಡು ಆಯಾ ಬೂತ್‌, ಶಕ್ತಿ ಕೇಂದ್ರ ಹಾಗೂ ಮಂಡಲಗಳ ಪ್ರಮುಖರನ್ನು ಜೋಡಿಸಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದೆ.

ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಮಾತನಾಡಿ, ಸದಸ್ಯತ್ವ ಅಭಿಯಾನ ಕೇವಲ ಸಂಖ್ಯಾತಕವಾಗಿ ಆದರೆ ಸಾಲದು. ಅದು ಗುಣಾತಕವಾಗಿರಬೇಕು. ಪಕ್ಷದ ಕಾರ್ಯವು ವಿಸ್ತಾರವಾಗಬೇಕಾದರೆ ಅದಕ್ಕೆ ಸದಸ್ಯತ್ವವು ಒಂದು ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೊಳಗೇರಿಯಿಂದ ಹಿಡಿದು ಮೇಲಟ್ಟದ ಹೊರಗಿನವರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಬೇಕು ಎಂದರು.

ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದ ಪರಿಣಾಮ ನಗರದಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಬಿಜೆಪಿ ಇಂದು ಮೊದಲನೇ ಸ್ಥಾನಕ್ಕೆ ಏರಿದೆ. ಪಕ್ಷದ ಸಕ್ರಿಯ ಸದಸ್ಯರಾಗಲು ಕನಿಷ್ಠ 100 ಜನರನ್ನು ಸದಸ್ಯರನ್ನಾಗಿ ಮಾಡಿಸಬೇಕಾಗುತ್ತದೆ. ಅಂತವರು ಪಕ್ಷದಲ್ಲಿ ಜವಾಬ್ದಾರಿಗಳನ್ನು ಪಡೆದುಕೊಳ್ಳಲು ಅರ್ಹತೆ ಪಡೆಯುತ್ತಾರೆ. ಸದಸ್ಯತ್ವ ಅಭಿಯಾನ ಪ್ರಕ್ರಿಯೆಯ ತಾಂತ್ರಿಕ ವಿಚಾರಗಳು ಇನ್ನೂ ಅರ್ಥವಾಗಿಲ್ಲವಾದರೆ ಪ್ರಮುಖರಾದ ರಾಕೇಶ್‌, ಸಂತೋಷ್‌ ಕೋಟ್ಯಾನ್‌, ಸಮೃದ್ಧ ಪೈ ಅವರನ್ನು ಭೇಟಿ ಮಾಡಿ ಗೊಂದಲಗಳಿದ್ದರೆ ಸರಿಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಬಿಜೆಪಿ ನಗರಾಧ್ಯಕ್ಷ ಕೆಂಪನಹಳ್ಳಿ ಪುಷ್ವರಾಜ್‌ , ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ ಆರ್‌ ದೇವರಾಜ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಡಾ. ನರೇಂದ್ರ, ಬೆಳವಾಡಿ ರವೀಂದ್ರ, ಮುಖಂಡರುಗಳಾದ ಪ್ರೇಮ್‌ ಕುಮಾರ್‌, ಬಿ.ರಾಜಪ್ಪ, ಜಸಂತಾಅನಿಲ್‌ ಕುಮಾರ್‌, ಪವಿತ್ರ, ಸಂತೋಷ್‌ ಕೋಟ್ಯಾನ್‌, ಬಸವರಾಜ್‌, ಜಿ.ಶಂಕರ ಉಪಸ್ಥಿತರಿದ್ದರು.

RELATED ARTICLES

Latest News