ಬೆಂಗಳೂರು, ನ.29 – ಪ್ರಸಕ್ತ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರಾದ ಬಸವರಾಜೇಂದ್ರ ಹೆಚ್. ಅವರು ಸ್ಪಷ್ಟಪಡಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಆ ಸಮಿತಿಯು ನೀಡುವ ವರದಿಯಂತೆ ಕ್ರಮವಹಿಸಲಾಗುವುದು.ಹಾಗಾಗಿ ಪ್ರಸಕ್ತ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ.
ಕಳೆದ ವರ್ಷದ ಶೈಕ್ಷಣಿಕ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಅವರು ತಿಳಿಸಿದ್ದಾರೆ.