Friday, July 11, 2025
Homeಬೆಂಗಳೂರುರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೊಬೈಲ್‌ ಕಳವು ಮಾಡುತ್ತಿದ್ದ ಚೋರನ ಬಂಧನ

ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೊಬೈಲ್‌ ಕಳವು ಮಾಡುತ್ತಿದ್ದ ಚೋರನ ಬಂಧನ

Thief arrested for stealing passengers' mobile phones at railway stations

ಬೆಂಗಳೂರು,ಜು.10– ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೊಬೈಲ್‌ ಕಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬೆಂಗಳೂರು ನಗರ ರೈಲ್ವೆ ಠಾಣೆ ಪೊಲೀಸರು ಬಂಧಿಸಿ 28.32 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ 49 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂಲತಃ ಪಶ್ಚಿಮ ಬಂಗಾಳ ರಾಜ್ಯದ ನಿವಾಸಿ ಸೂರತ್‌ ಪಾಸ್ವನ್‌ ಬಂಧಿತ ಮೊಬೈಲ್‌ ಕಳ್ಳ. ಇತ್ತೀಚೆಗೆ ನಗರ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪ್ರಯಾಣಿಕರ ಮೊಬೈಲ್‌ ಕಳವು ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದವು.

ಇದರಿಂದ ಎಚ್ಚೆತ್ತುಕೊಂಡ ಎಸ್‌‍ಪಿ ಡಾ.ಸೌಮ್ಯಲತಾ ಅವರು ಆರೋಪಿಗಳನ್ನು ಬಂಧಿಸುವಂತೆ ವಿಶೇಷ ತಂಡಗಳನ್ನು ರಚಿಸಿದ್ದರು.ಈ ತಂಡಗಳು ಡಿವೈಎಸ್‌‍ಪಿ ಸತೀಸ್‌‍ಕುಮಾರ್‌ ರವರ ಮಾರ್ಗದರ್ಶದಲ್ಲಿ ಕಾರ್ಯಾಚರಣೆ ಕೈಗೊಂಡು ಈ ಆರೋಪಿಯನ್ನು ಬಂಧಿಸಿವೆ. ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿ, ಪ್ರಯಾಣಿಕರ ಮೊಬೈಲ್‌ ಪ್ರಕರಣಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

RELATED ARTICLES

Latest News