ಬೆಂಗಳೂರು,ಜೂ.24- ಮನೆಗಳ್ಳತನ ಹಾಗೂ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿ 33.35ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಗಟ್ಟಿ,ಆಟೋರಿಕ್ಷಾ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪರಪ್ಪನ ಅಗ್ರಹಾರದ ನಿವಾಸಿ ನಾಗೇಶ್ (27) ಬಂಧಿತ ಆರೋಪಿ.ಆರೋಪಿಯಿಂದ 208 ಗ್ರಾಂ ಚಿನ್ನಾಭರಣ, 358 ಗ್ರಾಂ ಬೆಳ್ಳಿಯಗಟ್ಟಿ, 2 ಪ್ಯಾಸೆಂಜರ್ ಆಟೋರಿಕ್ಷಾಗಳು, 2 ಕ್ಯಾಮೆರಾಗಳು, 6 ಲೆನ್‌್ಸಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 33.35 ಲಕ್ಷ ರೂ. ಗಳೆಂದು ಅಂದಾಜಿಸಲಾಗಿದೆ.
ಹೆಗ್ಗನಹಳ್ಳಿ ಕ್ರಾಸ್‌ನ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಪ್ಯಾಸೆಂಜರ್ ಆಟೋರಿಕ್ಷಾ ಕಳ್ಳತನವಾಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಲಗ್ಗೆರೆ ಮುಖ್ಯರಸ್ತೆಯಲ್ಲಿರುವ ಆಲದಮರ ವೃತ್ತದ ಬಳಿ ಆಟೋರಿಕ್ಷಾ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆಟೋರಿಕ್ಷಾ ಕಳವು ಮಾಡಿರುವುದಲ್ಲದೇ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮನೆಗಳವು ಹಾಗೂ ಮತ್ತೊಂದು ಆಟೋರಿಕ್ಷಾವನ್ನು ಕಳ್ಳತನ ಮಾಡಿರುವುದಾಗಿ ಹೇಳಿದ್ದಾನೆ.
ಆರೋಪಿಯನ್ನು ಸುಧೀರ್ಘ ವಿಚಾರಣೆ ನಡೆಸಿದಾಗ, ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗಳವು ಹಾಗೂ ಆಟೋರಿಕ್ಷಾ ಮತ್ತು ಸರ್ಜಾಪುರದಲ್ಲಿ 2 ಮನೆಕನ್ನಕಳವು ಮಾಡಿರುವುದಾಗಿ, ಅಲ್ಲದೇ ಮಾದನಾಯಕನಹಳ್ಳಿಯಲ್ಲಿ 2 ಮನೆಕನ್ನಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.ಆರೋಪಿಯ ಬಂಧನದಿಂದ ಒಟ್ಟು 7 ಪ್ರಕರಣಗಳು ಪತ್ತೆಯಾಗಿವೆ. ಈ ಕಾರ್ಯಾಚರಣೆಯನ್ನು ಇನ್ಸ್ ಪೆಕ್ಟರ್ ಪುನೀತ್ ಹಾಗೂ ಸಿಬ್ಬಂದಿ ತಂಡ ಕೈಗೊಂಡಿತ್ತು.
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ
- ಟಿಆರ್ಎಫ್ನ್ನು ಜಾಗತಿಕ ಭಯೋತ್ಪಾದಕ ಸಂಘಟನೆಗೆ ಎಂದು ಘೋಷಿಸಿದ ಅಮೆರಿಕ ; ಭಾರತ ಸ್ವಾಗತ