ಬೆಂಗಳೂರು,ಜೂ.22– ರಾಜ್ಯ ಸರ್ಕಾರದ ಪ್ರಾಯೋಜಿತ ಭ್ರಷ್ಟಾಚಾರ ತೀವ್ರವಾಗಿದ್ದು, ಅದನ್ನು ಪ್ರಶ್ನಿಸುವ ಆಡಳಿತ ಪಕ್ಷದ ಶಾಸಕರನ್ನು ಬೆದರಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ಪ್ರಾಮಾಣಿಕ ವ್ಯಕ್ತಿ. ಬಹಳ ಗಂಭೀರವಾದ ವಿಚಾರವನ್ನು ಪ್ರಸ್ತಾಪಿಸಿದ್ದು, ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಬೆಳಕಿಗೆ ತಂದಿದ್ದಾರೆ ಎಂದು ಹೇಳಿದರು.
ಬಿ.ಆರ್.ಪಾಟೀಲ್ ಹೇಳಿಕೆಯಿಂದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ಬಯಲಿಗೆ ಬಂದಿವೆ. ಇದಕ್ಕಾಗಿ ಕಾಂಗ್ರೆಸ್‌ನವರು ಬಿ.ಆರ್.ಪಾಟೀಲ್ ಅವರನ್ನು ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ, ಬಡವರಿಗೆ ಶಾಸಪವಾಗಿದೆ ಎಂದಿದ್ದಾರೆ.
ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಡವರಿಗಾಗಿ ಅನೇಕ ಯೋಜನೆಗಳನ್ನು ನೀಡಿದ್ದರು. ಗಂಗಾಕಲ್ಯಾಣ ಸೇರಿದಂತೆ ಅನೇಕ ಯೋಜನೆಗಳು ಇಂದು ನಿಂತುಹೋಗಿವೆ. ಕೇವಲ ಭ್ರಷ್ಟಾಚಾರ ಮಾತ್ರ ಕಂಡುಬರುತ್ತಿದೆ ಎಂದು ದೂರಿದರು. ರಾಜ್ಯ ಸರ್ಕಾರವೇ ಭ್ರಷ್ಟಾಚಾರಕ್ಕೆ ಕುಮಕ್ಕು ನೀಡುತ್ತಿದೆ ಎಂದು ಬಿ.ಆರ್.ಪಾಟೀಲ್ ಹೇಳಿಕೆಯಿಂದ ಸಾಬೀತಾಗಿದೆ. ವಸತಿ ಸೇರಿದಂತೆ ಬೇರೆ ಬೇರೆ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ದನಿ ಎತ್ತಲಿದೆ ಎಂದು ಹೇಳಿದರು.
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ
- ಟಿಆರ್ಎಫ್ನ್ನು ಜಾಗತಿಕ ಭಯೋತ್ಪಾದಕ ಸಂಘಟನೆಗೆ ಎಂದು ಘೋಷಿಸಿದ ಅಮೆರಿಕ ; ಭಾರತ ಸ್ವಾಗತ