Sunday, December 1, 2024
Homeರಾಜ್ಯಮೂವರ ಬಂಧನ :5 ಕಾರು, 2 ದ್ವಿಚಕ್ರ ವಾಹನ ಜಫ್ತಿ

ಮೂವರ ಬಂಧನ :5 ಕಾರು, 2 ದ್ವಿಚಕ್ರ ವಾಹನ ಜಫ್ತಿ

ಬೆಂಗಳೂರು, ಫೆ.6-ಕಾರು ಮತ್ತು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿ 10.65 ಲಕ್ಷ ರೂ. ಮೌಲ್ಯದ 5 ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ವಿವಿಧ ಕಡೆಗಳಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಹೆಚ್ಚಾಗಿ ದಾಖಲಾಗಿದ್ದವು. ಆರೋಪಿಗಳನ್ನು ಪತ್ತೆ ಹಚ್ಚಲು ಆಗ್ನೇಯ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಸಿ ಕೆ ಬಾಬಾ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿಗೆ ಜೆಡಿಎಸ್ ಉಪಾಧ್ಯಕ್ಷ ಸ್ಥಾನ

ವಿಡಿಯೋ ದೃಶ್ಯಾವಳಿಗಳನ್ನು ವೀಕ್ಷಿಸಿ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಮತ್ತು ಬಾತ್ಮಿದಾರರಿಂದಲೂ ಸಹ ಮಾಹಿತಿಯನ್ನು ಸಂಗ್ರಹಿಸಿ ಮೂವರು ವಾಹನ ಕಳ್ಳರನ್ನು ಬಂಧಿಸಿದ್ದಾರೆ. ಆರೋಪಿಗಳ ಬಂಧನದಿಂದ ಕೋರಮಂಗಲ, ರಾಜರಾಜೇಶ್ವರಿ ನಗರ, ಜಯನಗರ, ಹನುಮಂತನಗರ, ಸುಬ್ರಮಣ್ಯ ನಗರ, ಬನಶಂಕರಿ ಮತ್ತು ಕೆಂಗೇರಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 8 ಪ್ರಕರಣಗಳು ಪತ್ತೆಯಾಗಿರುತ್ತದೆ.

ಈ ಪೈಕಿ 5 ಕಾರು ಪ್ರಕರಣಗಳು 2 ದ್ವಿಚಕ್ರ ವಾಹನ ಪ್ರಕರಣಗಳು ಮತ್ತು ಒಂದು ಕಳವಿಗೆ ಯತ್ನ ಪ್ರಕರಣಗಳಲ್ಲಿ 10.65 ಲಕ್ಷ ರೂ. ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೋರಮಂಗಲ ಠಾಣೆ ಇನ್ಸ್‍ಪೆಕ್ಟರ್ ನಟರಾಜ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು.

RELATED ARTICLES

Latest News