ದ್ವಿಚಕ್ರವಾಹನ ಕದ್ದು ದರೋಡೆ ಮಾಡುತ್ತಿದ್ದ ಮೂವರ ಬಂಧನ

Social Share

ಬೆಂಗಳೂರು, ಜ.24- ದ್ವಿಚಕ್ರ ವಾಹನ ಕಳ್ಳತನ ಮಾಡಿ ಅದೇ ವಾಹನ ಬಳಸಿಕೊಂಡು ದರೋಡೆ ಮಾಡುತ್ತಿದ್ದ ಮೂವರನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಸಿ 30 ಲಕ್ಷ ರೂ. ಬೆಲೆಯ ಸರ, ದ್ವಿಚಕ್ರ ವಾಹನಗಳು, ಆಟೋ, ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
ಜೆಜೆ ನಗರದ ಕಬೀರ್ ಪಾಷ್(20), ಸಯ್ಯದ್ ಖರೀಂ(30) ಮತ್ತು ಶಾವಣ್ಣ ಗಾರ್ಡನ್ ನಿವಾಸಿ ಅಫ್ತಾದ್ ಪಾಷ(20) ಬಂಧಿತರು.ಆರೋಪಿಗಳಿಂದ 65 ಗ್ರಾಂ ತೂಕದ ಚಿನ್ನದ ಸರ, 25 ದ್ವಿಚಕ್ರ ವಾಹನಗಳು, ಆಟೋರಿಕ್ಷಾ, ವಿವಿಧ ಕಂಪೆನಿಯ 24 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಈ ಮೂವರು ಮನೆಗಳ ಮುಂದೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದಂತಹ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು. ಅಲ್ಲದೇ ಅದೇ ವಾಹನಗಳನ್ನು ಬಳಸಿಕೊಂಡು ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು.
ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಪಿಎಸ್‍ಐ ಸಂಜೀವ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ರಚಿಸಲಾಗಿತ್ತು.ಈ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಕಬೀರ್ ಪಾಷನನ್ನು ಬಂಸಿ ವಿಚಾರಣೆಗೊಳಪಡಿಸಿ ನಂತರ ಇನ್ನಿಬ್ಬರು ಆರೋಪಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಈ ತಂಡ ಯಶಸ್ವಿಯಾಗಿದೆ.
ಆರೋಪಿಗಳು ನಗರದ ಹಲವಾರು ಪ್ರದೇಶಗಳಲ್ಲಿ ಮತ್ತು ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನಗಳು, ಮೊಬೈಲ್, ಚಿನ್ನದ ಸರ ಕಳವು ಮಾಡಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದು , ಒಟ್ಟು 25 ವಾಹನ ಕಳ್ಳತನ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ.
ಆರೋಪಿಗಳ ಬಂಧನದಿಂದ ಬ್ಯಾಟರಾಯನಪುರ ಪೊಲೀಸ್ ಠಾಣೆಯ 3 ದ್ವಿಚಕ್ರ ವಾಹನ ಕಳವು ಪ್ರಕರಣ, ಕೆಂಗೇರಿ-2, ವಿಜಯನಗರ-2, ಡಿಜೆ ಹಳ್ಳಿ, ಚಾಮರಾಜಪೇಟೆ, ಕೆಪಿ ಅಗ್ರಹಾರ, ಶಂಕರಪುರ, ಜೆಜೆ ನಗರ, ಸುಬ್ರಹ್ಮಣ್ಯನಗರ, ಉಳ್ಳಾಲ ಪೊಲೀಸ್ ಠಾಣೆಯ ತಲಾ ಒಂದೊಂದು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಬೆ¼ಕಿಕೆ ಬಂದಿವೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಒಂದು ಸುಲಿಗೆ ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆಮೊಬೈಲ್ ಫೋನ್‍ಗಳ ಮತ್ತು 6 ದ್ವಿಚಕ್ರ ವಾಹನ ವಾರಸುದಾರರ ಪತ್ತೆ ಕಾರ್ಯ ಮುಂದುವರೆದಿದೆ. ಇನ್ಸ್‍ಪೆಕ್ಟರ್ ಶಂಕರ್‍ನಾಯಕ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಉತ್ತಮ ಕಾರ್ಯವನ್ನು ಹಿರಿಯ ಪೊಲೀಸ್ ಅಕಾರಿಗಳು ಶ್ಲಾಘಿಸಿದ್ದಾರೆ.

Articles You Might Like

Share This Article