Monday, May 5, 2025
Homeಜಿಲ್ಲಾ ಸುದ್ದಿಗಳು | District Newsಹೊಂಡದಲ್ಲಿ ಮುಳುಗಿ ಮೂವರು ಬಾಲಕರ ದುರ್ಮರಣ

ಹೊಂಡದಲ್ಲಿ ಮುಳುಗಿ ಮೂವರು ಬಾಲಕರ ದುರ್ಮರಣ

Three boys drown in a well

ಯಾದಗಿರಿ,ಮೇ.5 : ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ಹೊಂಡದಲ್ಲಿ ಮುಳುಗಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಅಚೊಲಾ ತಾಂಡಾದಲ್ಲಿ ನಡೆದಿದೆ. ಕುರಿ ಕಾಯಲು ಹೋಗಿದ್ದ ಬಾಲಕರು ಬೇಸಿಗೆ ಹಿನ್ನಲೆ ನೀರಿನ ದಾಹ ತಣಿಸಿಕೊಳ್ಳಲು ಕೃಷಿ ಹೊಂಡದ ಬಳಿ ಹೋಗಿದ್ದರು ಈ ವೇಳೆ ಕಾಲು ಜಾರಿ ಬಿದ್ದು ನೀರು ಪಾಲು ಆಗಿರಬಹುದು ಎನ್ನಲಾಗಿದೆ.

ಅಚೊಲಾ ತಾಂಡಾದ ನಿವಾಸಿಗಳಾದ ಅಮರ್(12), ಜಯ(14), ಕೃಷ್ಣ 10) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಯಾದಗಿರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಮಕ್ಕಳ ಸಾವಿನ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

RELATED ARTICLES

Latest News