ಬೆಂಗಳೂರು,ಜೂ.20-ನಗರದ ವಿವಿಧ ಕಡೆಗಳಲ್ಲಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿ 12 ಲಕ್ಷ ರೂ. ಮೌಲ್ಯದ ಆರು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಉಮೇಶ್, ತಬ್ರೇಜ್ ಮತ್ತು ಜಬಿ ಖಾನ್ ಬಂಧಿತ ಆರೋಪಿಗಳು. 2020 ರಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಕಳ್ಳತನ ಪ್ರಕರಣದಲ್ಲಿ ಈ ಮೂವರು ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲಿಗೆ ಹೋಗಿ ಬಂದಿದ್ದರು.
ನಂತರದ ದಿನಗಳಲ್ಲಿ ಈ ಮೂವರು ತಮ ಚಾಳಿಯನ್ನು ಬದಲಿಸಿಕೊಂಡಿಲ್ಲ. ಟ್ರ್ಯಾಕ್ಟರ್ ಕಳ್ಳತನ ಬಿಟ್ಟು, ಕಳೆದ ಮೇ ತಿಂಗಳಿನಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರು ಕಳ್ಳತನ ಮಾಡಿದ್ದಾರೆ.
ಕಾರು ಕಳ್ಳತನ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಮೂವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿ 12 ಲಕ್ಷ ರೂ. ಮೌಲ್ಯದ 6 ಓಮ್ನಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ
- ನಗರ್ತಪೇಟೆ ಅಗ್ನಿ ಅವಘಡ, ಇಬ್ಬರ ಬಂಧನ