Friday, November 15, 2024
Homeರಾಜ್ಯಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮೂರು ದಿನ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮೂರು ದಿನ ಮಳೆ

Rain Forecast

ಬೆಂಗಳೂರು, ನ.12– ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೂರುದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ.

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.

ವಾಯುಭಾರ ಕುಸಿತದ ಪರಿಣಾಮದಿಂದ ಹಿಂಗಾರು ಮಳೆ ಚೇತರಿಕೆ ಕಂಡಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್‌‍.ಪಾಟೀಲ್‌ ತಿಳಿಸಿದ್ದಾರೆ.

ನವೆಂಬರ್‌ 15 ರವರೆಗೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಆಗಾಗ್ಗೆ ತಂಪಾದ ಮೇಲೈ ಗಾಳಿ ಬೀಸಲಿದೆ. ಕೆಲವೊಮೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಇದೇ ಪರಿಸ್ಥಿತಿ ನ. 15 ರವರೆಗೆ ಮುಂದುವರೆಯಲಿದೆ. ಇದರಿಂದ ಚಳಿಯ ವಾತಾವರಣ ಹೆಚ್ಚಾಗುವ ಅನುಭವವಾಗಲಿದೆ. ಅಲ್ಲದೆ, ಮೂರು ದಿನಗಳ ಕಾಲ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಕಂಡುಬರುತ್ತಿವೆ.

RELATED ARTICLES

Latest News