ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಸಾಧ್ಯತೆ

Social Share

ಬೆಂಗಳೂರು,ನ.21- ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಪ್ರಾರಂಭವಾಗುವ ಸೂಚನೆಗಳಿವೆ. ಬಂಗಾಳಕೊಲ್ಲಿ ಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮೂರು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮೂರು ನಾಲ್ಕು ದಿನಗಳ ಕಾಲ ಕಂಡು ಬರಲಿದೆ. ನಾಳೆಯಿಂದ ನ. 24ರವರೆಗೆ ರಾಜ್ಯದ ಪೂರ್ವಭಾಗದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದು 12 ಮಂದಿ ಸಾವು

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪ್ರಬಲವಾಗಿದ್ದು. ಆಂಧ್ರದ ಕರಾವಳಿ ಕಡೆಗೆ ಸಾಗುತ್ತಿರುವುದರಿಂದ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಉಂಟಾಗುವುದಿಲ್ಲ. ಇನ್ನೆರಡು ದಿನದಲ್ಲಿ ವಾಯುಭಾರ ಕುಸಿತವು ದುರ್ಬಲಗೊಳ್ಳುವ ಮುನ್ಸೂಚನೆಗಳಿವೆ. ಹೀಗಾಗಿ ಆತಂಕ ಪಡುವಂತಹ ಮಳೆಯಾಗುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಪ್ಲಾಟ್‍ಫಾರ್ಮ್‍ಗೆ ಗೂಡ್ಸ್ ರೈಲು ಡಿಕ್ಕಿ : ಇಬ್ಬರು ಸಾವು

ಮೋಡ ಕವಿದಿದ್ದು, ಆಗಾಗ್ಗೆ ತಂಪಾದ ಗಾಳಿ ಬೀಸುವುದರಿಂದ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗವ ನಿರೀಕ್ಷೆ ಇದೆ. ರಾಜ್ಯದ ದಕ್ಷಿಣ ಒಳನಾಡಿನ ಹಾಗೂ ಪೂರ್ವ ಭಾಗದ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷಿಸಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Three, days, rain, Bengaluru,

Articles You Might Like

Share This Article