Saturday, September 14, 2024
Homeರಾಷ್ಟ್ರೀಯ | Nationalಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಮೂವರ ಸಾವು

ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಮೂವರ ಸಾವು

ಸಿತಾಮರ್ಹಿ (ಬಿಹಾರ), ನ.19 ಬಿಹಾರದ ಸಿತಾಮರ್ಹಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿದ ಆರೋಪದ ಮೇಲೆ ಮೂವರು ಸಾವನ್ನಪ್ಪಿದ್ದು, ಓರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಕಲಿ ಮದ್ಯ ಮಾರಾಟ ಆರೋಪದ ಮೇಲೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆಸುಮಾರು 90 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ವ್ಯಕ್ತಿಗಳು ನಕಲಿ ಮದ್ಯ ಸೇವಿಸಿ ಸೀತಾಮರ್ಹಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸುಳಿವಿನ ಮೇರೆಗೆ ಮಧ್ಯರಾತ್ರಿ ಪೊಲೀಸರು ಸ್ಥಳಕ್ಕೆ ತಲುಪಿದರು. ಆದಾಗ್ಯೂ, ಅವರು ಆಸ್ಪತ್ರೆಗೆ ಬರುವ ಹೊತ್ತಿಗೆ, ಅವದೇಶ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಬಹುದು ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ

ರೋಶನ್ ರೈ ಎಂದು ಗುರುತಿಸಲಾದ ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಆತನ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅದು ಹೇಳಿದೆ.

ತನಿಖೆಯ ವೇಳೆ ಈ ಪ್ರದೇಶದಲ್ಲಿ ಮತ್ತಿಬ್ಬರು ನಕಲಿ ಮದ್ಯ ಸೇವಿಸಿ ಮೃತಪಟ್ಟಿರುವುದು ಪೊಲೀಸರಿಗೆ ತಿಳಿದು ಬಂದಿದೆ.ಈ ಪ್ರದೇಶದಲ್ಲಿ ಇನ್ನಿಬ್ಬರು ಸಾವನ್ನಪ್ಪಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು. ಆದರೆ ಶವಗಳನ್ನು ಸುಟ್ಟುಹಾಕಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News