ಬೆಂಗಳೂರು,ಡಿ.5- ತರಕಾರಿ ತೆಗೆದುಕೊಂಡು ಹೋಗಲು ಎಪಿಎಂಸಿಗೆ ಟಾಟಾಏಸ್ ವಾಹನದಲ್ಲಿ ಆರೇಳು ಮಂದಿ ಬರುತ್ತಿದ್ದಾಗ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ನಿವಾಸಿಗಳಾದ ಮಂಜುನಾಥ್, ಲಕ್ಷ್ಮಮ್ಮ ಮತ್ತು ರತ್ನಮ್ಮ ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡಿರುವ ಮೂವರ ಪೈಕಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನಿಬ್ಬರು ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.
ಇವರೆಲ್ಲರೂ ತರಕಾರಿ ವ್ಯಾಪಾರಿಗಳಾಗಿದ್ದು, ಪ್ರತಿನಿತ್ಯ ದಾಸನಪುರ ಎಪಿಎಂಸಿಗೆ ಬಂದು ತರಕಾರಿ ತೆಗೆದುಕೊಂಡು ಹೋಗುತ್ತಾರೆ. ಅದರಂತೆ ಇಂದು ಮುಂಜಾನೆ ಇವರೆಲ್ಲರೂ ಟಾಟಾ ಏಸ್ ವಾಹನದಲ್ಲಿ ತರಕಾರಿ ತೆಗೆದುಕೊಂಡು ಹೋಗಲು ಬರುತ್ತಿದ್ದರು.
ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬುದು ಜನರ ಅಪೇಕ್ಷೆ : ಶಾಸಕ ಜಮೀರ್
ಮುಂಜಾನೆ 1.30ರ ಸುಮಾರಿನಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ(75)ಯ ನಾರಾಯಣಿ ಪಾಳ್ಯದ ಗೇಟ್ ಬಳಿ ಅತಿವೇಗದಿಂದಾಗಿ ಟಾಟಾ ಏಸ್ ವಾಹನ ನಿಯಂತ್ರಣ ತಪ್ಪಿ ಉರುಳಿ ಈ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಅಮರನಾಥಗೌಡ ಹಾಗೂ ದ್ವಾರಕೀಶ್‍ಗೆ ಗೌರವ ಡಾಕ್ಟರೇಟ್ ಪ್ರದಾನ
ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿಡಲಾಗಿದೆ. ಕುದೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Three, died, accident, Bengaluru,