ಇಡುಕ್ಕಿ (ಕೇರಳ), ಜ.6-ಪುಲ್ಲುಪಾರ ಬಳಿ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಕಮರಿಗೆ ಉರುಳಿಬಿದ್ದು ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಬಸ್‌ನಲ್ಲಿ 34 ಪ್ರಯಾಣಿಕರಿದ್ದರು,ಅದು ತಮಿಳುನಾಡಿನ ತಂಜಾವೂರಿಗೆ ತೆರಳಿ ಕೇರಳದ ಅಲಪ್ಪುಳ ಜಿಲ್ಲೆಯ ಮಾವೇಲಿಕರಕ್ಕೆ ಹಿಂದಿರುಗುತ್ತಿದ್ದಾಗ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅವರು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿಯುತ್ತಿದಂತೆ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿಯನ್ನುಸ್ಥಳಕ್ಕೆ ದಾವಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ.
ಸ್‌ತಳದಲ್ಲೇ ಮೂವರು ಮೃತಪಟ್ಟಿದ್ದು ಅವರ ಶವಗಳನ್ನು ಮೇಲೆತ್ತಿ ಮುಂಡಕಾಯಂನಲ್ಲಿರುವ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಘಟನೆಗೆ ಕಾರಣ ತಿಳಿದುಬಂದಿಲ್ಲ ,ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.