Tuesday, April 16, 2024
Homeರಾಜ್ಯಬೆಂಗಳೂರು-ಮೈಸೂರು ಹೈವೆಯಲ್ಲಿ ಭೀಕರ ಅಪಘಾತ : ಮೂವರ ಸಾವು

ಬೆಂಗಳೂರು-ಮೈಸೂರು ಹೈವೆಯಲ್ಲಿ ಭೀಕರ ಅಪಘಾತ : ಮೂವರ ಸಾವು

ಚನ್ನಪಟ್ಟಣ,ಫೆ.17- ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ಕೋಲೂರುಗೇಟ್ ಬಳಿ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೈಸೂರಿನ ಮೂವರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಮೈಸೂರಿನ ನಿವಾಸಿಗಳಾದ ಸೋಮ ಲಿಂಗಪ್ಪ(70), ಸೋಮಣ್ಣ(68) ಮತ್ತು ರಾಜೇಶ್ವರಿ(50) ಮೃತ ದುರ್ದೈವಿಗಳು.

ಅಪಘಾ ತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಟಿಟಿ ವಾಹನದಲ್ಲಿ ಇವರೆಲ್ಲರೂ ಹಾವೇರಿಗೆ ಹೋಗಿ ಮದುವೆ ಮುಗಿಸಿಕೊಂಡು ಮೈಸೂರಿಗೆ ವಾಪಸಾಗುತ್ತಿದ್ದ ವೇಳೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಚನ್ನಪಟ್ಟಣ ತಾಲೂಕು ಕೋಲೂರು ಗೇಟ್ ಬಳಿ ಅತಿವೇಗವಾಗಿ ಬಂದ ಲಾರಿಯೊಂದು ಹಿಂದಿನಿಂದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮುಂದಿನ ಪೀಳಿಗೆಯ ಹೆಚ್-3 ರಾಕೆಟ್ ಉಡಾಯಿಸಿದ ಜಪಾನ್

ಅಪಘಾತದಿಂದಾಗಿ ಈ ಮಾರ್ಗದ ಸಂಚಾರದಲ್ಲಿ ವಾಹನಗಳ ದಟ್ಟಣೆ ಉಂಟಾಗಿತ್ತು. ಸುದ್ದಿ ತಿಳಿದು ಸಿಪಿಐ ರವಿಕಿರಣ್ ಅವರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

RELATED ARTICLES

Latest News