ಶ್ರೀನಗರ, ಡಿ.20-ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲಾಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ ಉಗ್ರರು ಹತರಾಗಿದ್ದಾರೆ.
ಝೈನಾಪೋರಾ ಪ್ರದೇಶದ ಮುಂಜ್ ಮಾರ್ಗ್ನಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಡಗಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಮಡಿನ ದಾಳಿ ನಡೆಸಿದರು ನಂತರ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ, ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.
ಬಿ.ಎಲ್.ಸಂತೋಷ್ ವಿರುದ್ಧ ರೊಚ್ಚಿಗೆದ್ದ ಹೆಚ್.ಡಿ.ಕುಮಾರಸ್ವಾಮಿ
ಹತರಾಗಿರುವ ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿದ್ದು ಗುರುತು ಖಚಿತಪಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಸೇನಾ ವಕ್ತಾರರು ಟ್ವೀಟ್ ಮಾಡಿದ್ದಾರೆ.
Three, LeT, militants, killed, Shopian, encounter,