Thursday, September 19, 2024
Homeಜಿಲ್ಲಾ ಸುದ್ದಿಗಳು | District Newsಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಶಿವಮೊಗ್ಗ, ಆ. 13- ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ನಗರದ ಕ್ಲಾರ್ಕ್ಪೇಟೆ ನಿವಾಸಿಗಳಾದ ಭುವನೇಶ್ವರಿ, ಮಾರುತಿ, ದರ್ಶನ್ ಆತ್ಮಹತ್ಯೆಗೆ ಶರಣಾದವರು.

ಈ ಮೂವರು ಎರಡು ದಿನದ ಹಿಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.ಸಂಬಂಧಿಕರು ನಿನ್ನೆ ದೂರವಾಣಿ ಕರೆ ಮಾಡಿದಾಗ ಭುವನೇಶ್ವರಿ ಅವರು ಸ್ವೀಕರಿಸಿಲ್ಲ. ಮತ್ತೊಮ್ಮೆ ರಾತ್ರಿ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಸಂಬಂಽಕರು ಆತಂಕಗೊಂಡಿದ್ದಾರೆ.

ಇಂದು ಬೆಳಗ್ಗೆ ಸಂಬಂಧಿಕರು ಇವರ ಮನೆಗೆ ಬಂದು ಬಾಗಿಲು ತೆಗೆದಾಗ ಮೂವರೂ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೂವರ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಟುಂಬದವರ ಆತ್ಮಹತ್ಯೆಗೆ ಸದ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಮನೆಯನ್ನೆಲ್ಲ ಶೋಧಿಸಿ, ತನಿಖೆ ನಡೆಸುತ್ತಿದ್ದಾರೆ.

RELATED ARTICLES

Latest News