ಬೆಂಗಳೂರು, ಜ. 7- ಸುಮಾರು 90 ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಮೈಕೋ ಲೇಔಟ್ ಠಾಣೆ ಪೊಲೀಸರು ಬಂಧಿಸಿ 8.50 ಲಕ್ಷ ರೂ. ಮೌಲ್ಯದ 35 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಮಾರಿಮುತ್ತು, ಸೈಯ್ಯದ್ ಸುಹೇಲ್ ಮತ್ತು ಭರತ್ ಬಂಧಿತರು. ಮೊಬೈಲ್ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮತ್ತೊಬ್ಬನ ಪತ್ತೆ ಕಾರ್ಯ ಮುಂದುವರೆದಿದೆ.
ಬಿಳೇಕಹಳ್ಳಿಯ 8ನೇ ಮುಖ್ಯರಸ್ತೆ ನಿವಾಸಿ ಸುಜಿತ್ ಎಂಬುವರು ಡಿ. 28ರಂದು ಬೆಳಗ್ಗೆ ಊರಿನಿಂದ ಬಸ್ನಲ್ಲಿ ಬಂದು ಬಿಳೇಕಳ್ಳಿ ಬಸ್ ನಿಲ್ದಾಣದಲ್ಲಿ ಇಳಿದು ತಮ್ಮ ಐ ಫೋನ್ ನಲ್ಲಿ ಕ್ಯಾಬ್ ಬುಕ್ ಮಾಡುತ್ತಿದ್ದಾಗ ಸ್ಕೂಟರ್ನಲ್ಲಿ ಬಂದ ಇಬ್ಬರು ದರೋಡೆಕೋರರು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಬಗ್ಗೆ ಮೈಕೋ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಬರೋಬರಿ 90 ಸಿಸಿ ಟಿವಿಗಳನ್ನು ಪರಿಶೀಲಿಸಿದಾಗ ಮೊಬೈಲ್ ಸುಲಿಗೆಕೋರರ ಸುಳಿವು ಸಿಕ್ಕಿದೆ. ಈ ಆಧಾರದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಿ 8.50 ಲಕ್ಷ ರೂ. ಮೌಲ್ಯದ 35 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಬ್ಲೂ ಆ್ಯಪ್ ಬಳಸಿ ಬ್ಲಾಕ್ಮೇಲ್ ಮಾಡಿದ್ದ ಮಹಿಳೆ ಸೇರಿ ಇಬ್ಬರ ಬಂಧನ
ಆರೋಪಿಗಳಿಂದ ಮಾಹಿತಿಯನ್ನು ಕಲೆ ಹಾಕಿ ತನಿಖೆಯನ್ನು ಮುಂದುವರೆಸಿದ್ದು, ತನಿಖಾ ಕಾಲದಲ್ಲಿ ಮೈಕೋ ಲೇಔಟ್ನ 6 ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ.
ಆಗ್ನೇಯ ವಿಭಾಗದ ಡಿಸಿಪಿ ಪೊಲೀಸ್ ಕಮೀಷನ್ ಸಿ.ಕೆ. ಬಾಬಾ ಅವರ ಮಾರ್ಗದರ್ಶನದಲ್ಲಿ ಮೈಕೋ ಲೇಔಟ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರ ನೇತೃತ್ವದಲ್ಲಿ ಮೈಕೋ ಲೇಔಟ್ ಠಾಣೆ ಇನ್ಸ್ಪೆಕ್ಟರ್ ಗಿರೀಶ್ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
Three, mobile, robbers, arrested,