ಬಿಜಾಪುರ್, ನ.26- ಛತ್ತೀಸ್‍ಗಡ ರಾಜ್ಯ ಬಿಜಾಪುರ ಜಿಲ್ಲೆಯ ಮಿರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ತನಿಖಾ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ.
ನಕ್ಸಲ್ ಬಾತ ಈ ಭಾಗದಲ್ಲಿ ಸಿಆರ್‍ಪಿಎಫ್, ಡಿಆರ್‍ಐ ಮತ್ತು ಎಸ್‍ಟಿಎಫ್ ಪಡೆಗಳು ಜಂಟಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದವು. ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುವ ವೇಳೆ ನಕ್ಸಲರು ಎದುರಾಗಿದ್ದು ಗುಂಡಿನ ಕಾಳಗದಲ್ಲಿ ಮೂವರು ಹತ್ಯೆಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಎಸ್.ಪಿ.ಆಂಜನೇಯ ವರ್ಸೆನಿ ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಸಿದ್ಧತೆ
ಕಳೆದ ವರ್ಷ ಅಕ್ಟೋಬರ್ ಕೊನೆಯಲ್ಲಿ ನಡೆದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಛತ್ತೀಸ್‍ಗಡ ದಂಡೆವಾಡ ಜಿಲ್ಲೆಯ ಕಟೆಕಲ್ಯಾಣ್ ಪೊಲೀಸ್ ಠಾಣೆಯ ವ್ಯಾಪ್ತಿಯ ಅದ್ವಾಲ ಮತ್ತು ಕುಂಜೆರಾ ಗ್ರಾಮಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮೂವರು ಮಹಿಳೆಯರನ್ನು ಹತ್ಯೆ ಮಾಡಲಾಗಿತ್ತು.
ಸಿಎಂ ಬೊಮ್ಮಾಯಿ ವಿರುದ್ದ ಕೇಸ್ ದಾಖಲಿಸುವಂತೆ ಸುರ್ಜೆವಾಲ ಒತ್ತಾಯ
ಅದಾದ ಬಳಿಕ ವರ್ಷದ ನಂತರ ಮತ್ತೊಂದು ಕಾರ್ಯಾಚರಣೆಯಲ್ಲಿ ಮತ್ತೆ ಮೂವರು ನಕ್ಸಲರ ಹತ್ಯೆಯಾಗಿದೆ.
Three , naxals, killed, encounter, CRPF,