ಹಾವೇರಿ : ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಮೂವರ ಸಾವು

ಹಾವೇರಿ,ಜು.19- ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಶಿಥಿಲಗೊಂಡಿದ್ದ ಮನೆ ಗೋಡೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆಯೆಂದು ಪೊಲೀಸರು ತಿಳಿಸಿದ್ದಾರೆ. ದುರಂತದಲ್ಲಿ ಚೆನ್ನಮ (30), ಅಮೂಲ್ಯ (3), ಅನನ್ಯಾ (6) ಮೃತ ದುರ್ದೈವಿಗಳಾಗಿದ್ದು,ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸವಣೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ವೃದ್ಧೆ ಯಲ್ಲಮ, … Continue reading ಹಾವೇರಿ : ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಮೂವರ ಸಾವು