Friday, November 22, 2024
Homeಬೆಂಗಳೂರುಐಷಾರಾಮಿ ಜೀವನಕ್ಕಾಗಿ ಕಳ್ಳತನ, ಮೂವರು ವಿದ್ಯಾರ್ಥಿಗಳ ಬಂಧನ

ಐಷಾರಾಮಿ ಜೀವನಕ್ಕಾಗಿ ಕಳ್ಳತನ, ಮೂವರು ವಿದ್ಯಾರ್ಥಿಗಳ ಬಂಧನ

ಬೆಂಗಳೂರು,ಅ.3- ಐಷರಾಮಿ ಜೀವನ ನಡೆಸಲು ಕಳ್ಳತನಕ್ಕಿಳಿದಿದ್ದ ಮೂವರು ವಿದ್ಯಾರ್ಥಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿ 50 ಲಕ್ಷ ರೂ. ಬೆಲೆ ಬಾಳುವ ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಎಚ್‍ಎಸ್‍ಆರ್ ಲೇಔಟ್‍ನಲ್ಲಿ ವಾಸವಾಗಿರುವ ಪ್ರಭು, ಮೌನೇಶ್ ಹಾಗೂ ಅಜಯ್ ಬಂಧಿತ ವಿದ್ಯಾರ್ಥಿಗಳು. ಈ ಮೂವರು 19ರಿಂದ 21 ವಯೋಮಾನದವರು.

ಈ ಮೂವರ ಪೈಕಿ ಇಬ್ಬರು ಬಿಕಾಂ ವ್ಯಾಸಂಗ ಮಾಡುತ್ತಿದ್ದರೆ ಒಬ್ಬ ಬಿಸಿಎ ವಿದ್ಯಾರ್ಥಿಯಾಗಿದ್ದಾನೆ. ಐಷರಾಮಿ ಜೀವನ ಹಾಗೂ ಸಾಲ ತೀರಿಸುವ ಸಲುವಾಗಿ ಈ ಮೂವರು ಕಳ್ಳತನಕ್ಕೆ ಇಳಿದ್ದು ಪೊಲೀಸರ ವಿಚಾರಣೆಯಿಂದ ಗೊತ್ತಾಗಿದೆ.

ನ್ಯೂ ಬಿಇಎಲ್ ರಸ್ತೆಯಲ್ಲಿನ ಗ್ಯಾಜೆಟ್ ಕ್ಲಬ್ ಮೊಬೈಲ್ ಅಂಗಡಿಯ ಬೀಗ ಮುರಿದು ಒಳನುಗ್ಗಿ ಕಳ್ಳರು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಹಿರಿಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಇನ್‍ಸ್ಪೆಕ್ಟರ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

8 ಅಡಿ ಎತ್ತರದ ಪುನೀತ್ ಕಂಚಿನ ಪುತ್ಥಳಿ ಲೋಕಾರ್ಪಣೆ

ಈ ತಂಡವು ತನಿಖೆ ಕೈಗೊಂಡು ಹಲವು ಮಾಹಿತಿಗಳನ್ನು ಕಲೆ ಹಾಕಿ ಪ್ರಕರಣ ದಾಖಲಾದ 36 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿ ಸುಮಾರು 50 ಲಕ್ಷ ರೂ. ಬೆಲೆ ಬಾಳುವ 29 ಐ-ಫೋನ್‍ಗಳು, 3 ಒನ್ ಪ್ಲಸ್ ಮೊಬೈಲ್‍ಗಳು, 11 ಸ್ಯಾಮ್‍ಸಾಂಗ್, 3 ಗೂಗಲ್ ಫೋನ್, 4 ಒಪೊ ಮತ್ತು 2 ಐಕ್ಯೂಒಒ ಕಂಪನಿಯ ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಾಂದೇಡ್ : ಔಷಧಿ ಕೊರತೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 31ಕ್ಕೆ ಏರಿಕೆ

ಅಲ್ಲದೆ ವಿವಿಧ ಕಂಪನಿಯ ಲ್ಯಾಪ್‍ಟಾಪ್‍ಗಳು, ಸೋನಿ ಕಂಪನಿಯ ಹ್ಯಾಂಡಿಕ್ಯಾಮೆರಾಗಳು, 202 ವಿವಿಧ ಸ್ಮಾರ್ಟ್ ವಾಚ್‍ಗಳು ಹಾಗೂ ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರಲ್ಲದೆ, ಕೃತ್ಯಕ್ಕೆ ಬಳಸಿದ್ದ ಒಂದು ಮಾರುತಿ ಸುಜುಕಿ ಇಕೋ ಗೂಡ್ಸ್ ವಾಹನ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ವಿಭಾಗದ ಉಪಪೊಲೀಸ್ ಆಯುಕ್ತರಾದ ಸೈದುಲು ಅಡಾವತ್ ಮಾರ್ಗದರ್ಶನದಲ್ಲಿ ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್‍ಕುಮಾರ್ ಅವರ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಭಾಗವತಿ.ಜೆ ಬಂಟಿ ಮತ್ತು ಸಿಬ್ಬಂದಿ ಈ ಕಾರ್ಯಚರಣೆ ಕೈಗೊಂಡು ಮೂವರನ್ನು ಬಂಧಿಸಿ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES

Latest News