ಮರಕ್ಕೆ ಆಡಿ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳ ದುರ್ಮರಣ

ಕೋಲಾರ,ಆ.3- ಸ್ನೇಹಿತನ ಮನೆಗೆ ಹೋಗಿ ವಾಪಸ್‌‍ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಅತಿ ವೇಗದಿಂದಾಗಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಗ್ರಾಮಾಂತರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೇವಾ ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿಗಳಾದ ಹಾಸನ ಮೂಲದ ಹರ್ಷವರ್ಧನ್‌, ಬಳ್ಳಾರಿಯ ಬಸವರಾಜ್‌ ಹಾಗೂ ಬಂಗಾರಪೇಟೆಯ ನಿಚ್ಚಲ್‌ ಮೃತಪಟ್ಟ ವಿದ್ಯಾರ್ಥಿಗಳು.ಕಾರಿನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾಯಿಗಗನ್‌ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾನೆ. ಬಂಗಾರಪೇಟೆಯಲ್ಲಿರುವ ಸಾಯಿಗಗನ್‌ ಮನೆಗೆ ಈ … Continue reading ಮರಕ್ಕೆ ಆಡಿ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳ ದುರ್ಮರಣ