ತಿಗಳ ಸಮುದಾಯಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಅವಕಾಶ ಕಲ್ಪಿಸಿ

Social Share

ಬೆಂಗಳೂರು, ಮಾ, 18; ತಿಗಳ ಕ್ಷತ್ರಿಯ ಸಮುದಾಯಕ್ಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಬೇಕೆಂದು ವಿಶ್ವಕ್ಷತ್ರೀಯ ಮಹಾ ಸಂಸ್ಥಾನದ ಅಧ್ಯಕ್ಷ ಎಂ.ಡಿ.ಪ್ರಕಾಶ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಗಳ ಸಮುದಾಯ 19 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿದ್ದು, ರಾಜ್ಯದಲ್ಲಿ ಸುಮಾರು 40 ಲಕ್ಷಕ್ಕೂ ಅಧಿಕ ಜನರಿದ್ದಾರೆ. 120 ವಿಧಾನಸಭಾ ಕ್ಷೇತ್ರದಲ್ಲಿ ತಿಗಳ ಕ್ಷತ್ರೀಯ ಮತದಾರರು ನಿರ್ಣಾಯಕವಾಗಿದ್ದಾರೆ.

ಮುಖ್ಯವಾಗಿ ರಾಮನಗರ, ತುಮಕೂರು, ತುಮಕೂರು ಗ್ರಾಮಾಂತರ, ಗುಬ್ಬಿ, ತುರುವೇಕೆರೆ, ರಾಜಾಜಿನಗರ, ಮಾಲೂರು, ಕೋಲಾರ, ಹೊಸಕೋಟೆ, ಮಾಗಡಿ, ಚನ್ನಪಟ್ಟಣ , ಯಲಹಂಕ, ದಾಸರಹಳ್ಳಿ, ಶಾಂತಿನಗರ, ಮಹಾಲಕ್ಷ್ಮೀ ಲೇಔಟ್, ಯಶವಂತಪುರ, ಮಲ್ಲೇಶ್ವರಂ, ಹೆಬ್ಬಾಳ, ರಾಜರಾಜೇಶ್ವರಿನಗರ, ಕನಕಪುರ, ಮಂಡ್ಯ, ಮದ್ದೂರು, ಬೇಲೂರು ಹಾಗೂ ಇತರೆ ಭಾಗಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಹೇಳಿದರು.

ದೆಹಲಿಯಲ್ಲಿ ವಿದೇಶಿ ಪ್ರಜೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ನರೇಂದ್ರ.ಡಿ ರಾಮನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಕಾಕ್ಷಿಯಾಗಿದ್ದು, ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. ರಾಮನಗರ ಯುವಜನ ಪ್ರಾಧಿಕಾರದ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ರಾಜಾಜಿನಗರ ವಿಧಾನ ಸಭಾ ಕ್ಷೇತ್ರ, ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜು ಅವರಿಗೆ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದರು.

ಉಳಿದಂತೆ ತುಮಕೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ರೇವಣ ಸಿದ್ದಯ್ಯ, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಅರ್ಜುನ.ಡಿ ಅವರಿಗೆ ಟಿಕೆಟ್ ದೊರಕಿಸಿಕೊಡಬೇಕು.

ರಾಹುಲ್‍ಗಾಂಧಿ ಇಂದಿರಾ ನಡೆ ಅನುಸರಿಸಬೇಕಿತ್ತು ; ಶಾ

ತುಮಕೂರು ವಿಧಾನಸಭಾ ಕ್ಷೇತ್ರದ ಜೆ.ಡಿಎಸ್ ಅಭ್ಯರ್ಥಿಯಾಗಿ ರವೀಶ ಜಹಾಂಗಿರ್, ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ನಂಜೇಗೌಡ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅಕ್ಷಯ್, ಮಂಜುನಾಥ್ ಎಸ್ಆರ್, ನಾಗರಾಜು ಉಪಸ್ಥಿತರಿದ್ದರು.

Tigala Community, congress, BJP, JDS, , MD Prakash,

Articles You Might Like

Share This Article