Friday, November 22, 2024
Homeರಾಜ್ಯವನ್ಯಜೀವಿ ಸಂರಕ್ಷಣಾ ಕಾಯ್ದೆ ವಿಷಯದಲ್ಲಿ ಒತ್ತಡಕ್ಕೆ ಮಣಿಯುವುದಿಲ್ಲ : ಖಂಡ್ರೆ

ವನ್ಯಜೀವಿ ಸಂರಕ್ಷಣಾ ಕಾಯ್ದೆ ವಿಷಯದಲ್ಲಿ ಒತ್ತಡಕ್ಕೆ ಮಣಿಯುವುದಿಲ್ಲ : ಖಂಡ್ರೆ

ಬೆಂಗಳೂರು, ಅ.26- ವನ್ಯಜೀವ ಸಂರಕ್ಷಣಾ ಕಾಯ್ದೆ ಜಾರಿಯ ವಿಷಯದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೇ ನೆಲದ ಕಾನೂನನ್ನು ಸಮರ್ಥವಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ರಕ್ಷಣಾ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿಂದು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಕಾಯ್ದೆ ಜಾರಿಗೆ ಬಂದ ಬಳಿಕ ದಾಖಲಿಸಲಾದ ಪ್ರಕರಣಗಳು, ಈವರೆಗೂ ಎಷ್ಟು ಮಂದಿ ತಮ್ಮ ಬಳಿ ವನ್ಯಜೀವಿಗಳ ಅವಶೇಷಗಳಿವೆ ಎಂದು ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಪರಿಶೀಲನೆಗ ರಚಿಸಲಾಗಿರುವ ಹಿರಿಯ ಅಧಿಕಾರಿಗಳ ಉನ್ನತಾಧಿಕಾರಿಗಳ ಸಮಿತಿ ಶೀಘ್ರವೇ ವರದಿ ನೀಡಬೇಕು ಎಂದು ಸೂಚನೆ ನೀಡಿದರು.

ಖ್ಯಾತನಾಮರಷ್ಟೆ ಅಲ್ಲ, ಯಾವುದೇ ಪ್ರಭಾವಿ ವ್ಯಕ್ತಿ ಕಾಯ್ದೆಯನ್ನು ಉಲ್ಲಂಘಿಸಿದರು ಕರ್ನಾಟಕ ಅರಣ್ಯ ಕಾಯ್ದೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು. ನಿನ್ನೆ ನಡೆದ ದಾಳಿ ಪ್ರಕರಣದಲ್ಲಿ ವಶ ಪಡಿಸಿಕೊಂಡ ವಸ್ತುಗಳನ್ನು ವೈಜ್ಞಾನಿಕ ಪರೀಕ್ಷೆ ಒಳಪಡಿಸಬೇಕು. ವಸ್ತು ಸ್ಥಿತಿಯ ವರದಿ ಆಧಾರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ರಾಮನಗರಕ್ಕಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡ್ತೀನಿ : ಹೆಚ್‌ಡಿಕೆ

ಕೆಲವರ ಮೇಲಷ್ಟೆ ಕ್ರಮ ಕೈಗೊಂಡು ಪ್ರಭಾವಿಗಳನ್ನು ಕೈ ಬಿಟ್ಟರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ತಪ್ಪು ಯಾರೇ ಮಾಡಿದರೂ ಕಟ್ಟುನಿಟ್ಟಿನ ಕ್ರಮ ಜರುಗಿಸಿ, ಅರಣ್ಯಸಂರಕ್ಷಣಾಧಿಕಾರಿಗಳ ಕಚೇರಿಗೆ ನೀಡಿರುವ ಪೊಲೀಸ್ ಅಧಿಕಾರವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಿ. ಮಾಹಿತಿ ತಿಳಿದ ತಕ್ಷಣ ಶೋಧ ಕಾರ್ಯಾಚರಣೆ ನಡೆಸಿ, ಕ್ರಮ ಜರುಗಿಸಿ. ಪ್ರಭಾವಿಗಳನ್ನು ರಕ್ಷಣೆ ಮಾಡಲು ಯತ್ನಿಸಿದರೆ ಮುಂದಿನ ದಿನಗಳಲ್ಲಿ ಯಾರಾದರೂ ಕಾನೂನಿನ ಮೊರೆ ಹೋಗಬಹುದು. ಆ ವೇಳೆ ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ಸಲಹೆ ನೀಡಿದ್ದಾರೆ.

ಇದು ಈಗ ಸಾರ್ವಜನಿಕ ವಿಷಯವಾಗಿರುವುದರಿಂದ ಮುಚ್ಚಿಟ್ಟುಕೊಳ್ಳುವ ಅಥವಾ ತೆರೆಮರೆಯಲ್ಲಿ ಕ್ರಮ ಜರುಗಿಸಲು ಸಾಧ್ಯವಿಲ್ಲ. ಪಾರದರ್ಶಕತೆ ಹಾಗೂ ಕಾನೂನು ಬದ್ಧವಾಗಿ ನಡೆದುಕೊಳ್ಳಿ. ಪ್ರತಿ ಹಂತದಲ್ಲೂ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿ ಎಂದು ಸೂಚಿಸಿದರು.

RELATED ARTICLES

Latest News