ಸೋಶಿಯಲ್ ಮೀಡಿಯಾ ಖಾತೆಗಳ ಪ್ರೊಫೈಲ್‍ಗೆ ರಾಷ್ಟ್ರಧ್ವಜ ಹಾಕಲು ಪ್ರಧಾನಿ ಕರೆ

Social Share


ನವದೆಹಲಿ,ಜು.17- ಅಜಾದಿ ಕಾ ಅಮೃತ ಮಹೋತ್ಸವ ಸಂದರ್ಭದಲ್ಲಿ ಆ.2ರಿಂದ 15ರ ನಡುವೆ ದೇಶದ ಪ್ರತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿನ ತಮ್ಮ ಖಾತೆಗಳ ಪ್ರೊಫೈಲ್‍ಗೆ ತ್ರಿವರ್ಣ ಧ್ವಜ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್‍ನ 91ನೇ ಸರಣಿಯಲ್ಲಿ ಮಾತನಾಡಿದ ಅವರು, ಭಾರತ ಐತಿಹಾಸಿಕ ಮತ್ತು ಶ್ರೀಮಂತ ಪರಂಪರೆಯ ಕ್ಷಣಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ವಿಶೇಷ ಅಭಿಯಾನ ಕೂಡ ನಡೆಯುತ್ತಿದೆ. ಆಗಸ್ಟ್ 13ರಿಂದ 15ರವರೆಗೆ ಪ್ರತಿಯೊಬ್ಬರು ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

ಆ.2 ರಾಷ್ಟ್ರ ಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಾಳಿ ವೆಂಕಯ್ಯ ಅವರ ಜನ್ಮದಿನ. ಅಂದಿನಿಂದ ಸ್ವಾತಂತ್ರ್ಯೋತ್ಸವದ ದಿನವಾದ ಆ.15ರವರೆಗೂ ಪ್ರತಿಯೊಬ್ಬರು ತಮ್ಮ ಸಾಮಾಜಿಕ ಜಾಲತಾಣಗಳಿಗೆ ರಾಷ್ಟ್ರ ಧ್ವಜವನ್ನು ಪ್ರೊಫೈಲ್ ಪಿಕ್ಚರ್‍ನ್ನಾಗಿ ಮಾಡಿಕೊಳ್ಳಬೇಕು ಎಂದರು.

ಅಜಾದಿ ಕಾ ಅಮೃತ ಮಹೋತ್ಸವ ಜನರ ಸಾಮೂಹಿಕ ಚಳುವಳಿಯಾಗಿ ಪರಿವರ್ತನೆಯಾಗಿದೆ. ದೇಶದ ಪ್ರತಿಯೊಂದ ಕ್ಷೇತ್ರದ ಜನ ಇದರಲ್ಲಿ ಭಾಗವಹಿಸಿದ್ದಾರೆ. ಪ್ರತಿಯೊಂದು ಕಾರ್ಯಕ್ರಮಗಳು ನೆರವೇರಿವೆ ಎಂದರು. ಅಮೃತ ಮಹೋತ್ಸವದ ಕ್ಷಣಗಳಿಗೆ ನಾವು ಸಾಕ್ಷಿಯಾಗಿರುವುದು ನಮ್ಮ ಅದೃಷ್ಟ. ನನ್ನ ಪ್ರೀತಿಯ ದೇಶವಾಸಿಗಳೆ ನಾವು ದೇಶದ ಸ್ವಾತಂತ್ರ್ಯದ ಶತಮಾನೋತ್ಸವದ ಸಂದರ್ಭದಲ್ಲಿನ ಪ್ರಯಾಣದ ಬಗ್ಗೆ ಚರ್ಚೆ ಶುರು ಮಾಡಿದ್ದೇವೆ ಎಂದರು.

ನಾವೆಲ್ಲ ತ್ರಿವರ್ಣ ಧ್ವಜದ ಅಡಿಯಲ್ಲಿ ಜೊತೆಗೂಡೋಣ. ಪ್ರೀತಿ ಪಾತ್ರರನ್ನು ಸಮಾವೇಶಗೊಳಿಸಿಕೊಂಡು ನಮ್ಮ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸೋಣ ಆ ಆಚರಣೆಯ ಕ್ಷಣಗಳ ಮಾಹಿತಿಯನ್ನು ನನ್ನೊಂದಿಗೆ ಹಂಚಿಕೊಳ್ಳಿ ಅದರಲ್ಲಿ ಏನಾದರೂ ವಿಶೇಷತೆ ಇದ್ದರೆ ಅದರ ಬಗ್ಗೆ ಪ್ರಸ್ತಾಪಿಸುತ್ತೇನೆ. ಬಣ್ಣ ಬಣ್ಣದ ಅಮೃತೋತ್ಸವಕ್ಕೆ ಎಲ್ಲರಿಗೂ ಅಭಿನಂದನೆಗಳು ಎಂದು ಮೋದಿ ಹೇಳಿದರು.

Articles You Might Like

Share This Article