ಬಿಜೆಪಿ ಸೇರಲು ನಿರಾಕರಿಸಿದ್ದಕ್ಕೆ ಗಂಗೂಲಿಗೆ ಬಿಸಿಸಿಐ ಅಧ್ಯಕ್ಷ ಪಟ್ಟ ತಪ್ಪಲು ಕಾರಣ

Social Share

ಕೋಲ್ಕತ್ತಾ,ಅ.12- ಸೌರವ್ ಗಂಗೂಲಿ ಅವರು ಬಿಜೆಪಿ ಸೇರಲು ಹಿಂದೇಟು ಹಾಕಿದ ಪರಿಣಾಮವೇ ಅವರಿಗೆ ಎರಡನೆ ಅವಧಿಗೆ ಬಿಸಿಸಿಐ ಅಧ್ಯಕ್ಷ ಪಟ್ಟ ದಕ್ಕಲಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

ಕಳೆದ ವರ್ಷದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಬಿಜೆಪಿಯವರು ಬಂಗಾಳದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಗಂಗೂಲಿ ಅವರು ಬಿಜೆಪಿ ಸೇರುತ್ತಾರೆ ಎಂಬ ಗಾಳಿ ಸುದ್ದಿ ಹರಡಿಸಿದ್ದರು. ಆದರೆ, ಗಂಗೂಲಿ ಅವರು ಬಿಜೆಪಿ ಸೇರಲು ನಿರಾಕರಿಸಿರುವುದರಿಂದ ಅವರಿಗೆ ಕೇಸರಿ ಪಡೆಯವರು ಬಿಸಿಸಿಐ ಅಧ್ಯಕ್ಷ ಸ್ಥಾನ ನೀಡದೆ ಅಪಮಾನ ಮಾಡುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿಯಾಗಿ ಮುಂದುವರಿಯಬಹುದು ಆದರೆ ಗಂಗೂಲಿ ಅಧ್ಯಕ್ಷರಾಗಲು ಸಾಧ್ಯವಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಬಿಜೆಪಿಯವರ ನೈಜ ಬಂಡವಾಳವನ್ನು ಇದೀಗ ಸೌರವ್ ಗಂಗೂಲಿ ಅವರೇ ಬಯಲು ಮಾಡಬೇಕು ಎಂದು ಕುನಾಲ್ ಆಗ್ರಹಿಸಿದ್ದಾರೆ.

Articles You Might Like

Share This Article