ಶಿಕ್ಷಕರ ನೇಮಕಾತಿ ಹಗರಣದಲ್ಲಿ ಟಿಎಂಸಿ ಯುವ ನಾಯಕನ ಬಂಧನ

Social Share

ಕೋಲ್ಕತ್ತಾ,ಜ.21- ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಯುವ ಮುಖಂಡ ಕುಂತಲ್ ಘೋಷ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಚಿನಾರ್ ಪಾರ್ಕ್ ಅಪಾಟ್ರ್ಮೆಂಟ್‍ನಲ್ಲಿ ರಾತ್ರಿಯಿಡೀ ಶೋಧ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಶನಿವಾರ ಬೆಳಿಗ್ಗೆ ಘೋಷ್‍ರನ್ನು ಬಂಧಿಸಿದ್ದಾರೆ. ಶಿಕ್ಷಕರ ನೇಮಕಾತಿ ಹಗರಣದ ತನಿಖೆಗೆ ಸಹಕರಿಸದಿದ್ದಕ್ಕಾಗಿ ಕುಂತಲ್ ಘೋಷ್ ಅವರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ. ಇಂದು ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ನಿನ್ನೆ ಬೆಳಗ್ಗೆಯಿಂದ ಘೋಷ್‍ರ ಪ್ಲಾಟ್‍ನಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿ ಹಲವಾರು ದಾಖಲೆಗಳು ಮತ್ತು ಡೈರಿಯನ್ನು ವಶಪಡಿಸಿಕೊಂಡಿತ್ತು. ಇದೇ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೂಡ ಘೋಷ್‍ರಿಗೆ ಸಮನ್ಸ್ ನೀಡಿದ್ದಾರೆ.

TMC, youth leader, Kuntal Ghosh, arrested, Bengal, jobs scam,

Articles You Might Like

Share This Article