ಕೋವಿಡ್-19 ನಿಯಂತ್ರಣಕ್ಕೆ ತಂಬಾಕು ಉತ್ಪನ್ನ ನಿಷೇಧ

ದಾವಣಗೆರೆ, ಜೂ.1- ರಾಜ್ಯದಲ್ಲಿ ಕೋವಿಡ್-19 ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿರುವಂತೆ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ತಂಬಾಕು ಉತ್ಪನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಉಗುಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೋಲಿಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ತಾಲ್ಲೂಕು ಆರ್ಯೋಗ್ಯ ಅಧಿಕಾರಿಗಳು ಸಹಯೋಗದೊಂದಿಗೆ ಜಿಲ್ಲಾ ನಿಯಂತ್ರಣ ತಂಬಾಕು ಕೋಶದ ವತಿಯಿಂದ ಏರ್ಪಡಿಸಲಾಗಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ವೇಳೆ ಅಧಿಕಾರಿಗಳಿಗೆ ಮಾಸ್ಕ್ ವಿತರಿಸುವ ಮೂಲಕ ಉದ್ಘಾಟಿಸಿ ಆವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷವು ಸಹ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವರ್ಷ ತಂಬಾಕು ಉದ್ಯಮಗಳ ಕುತಂತ್ರ ಹಾಗೂ ತಂಬಾಕು ಮತ್ತು ನಿಕೋಟಿನ್ ಬಳಕೆಯಿಂದ ಯುವಕರನ್ನು ರಕ್ಷಣೆ ಮಾಡುವುದಾಗಿದೆ ಎಂದರು. ನಿಯಮ ಉಲ್ಲಂಘಿಸಿದಲ್ಲಿ ಐ.ಪಿ.ಸಿ ಸೆಕ್ಷನ್ 188,268,269,270 ಅಡಿಯಲ್ಲಿ ಪ್ರಾಧಿಕೃತ ಅಧಿಕಾರಿಗಳು ಅಗತ್ಯ ಕಾನೂನು ಕ್ರಮ ಕೈಗೊಳುವಂತೆ ಆರ್ಯೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಪದ್ಮ ಸೂಚಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಜಿಲ್ಲಾಧಿಕಾರಿಗಳಿಗೆ 200 ಮಾಸ್ಕ್‍ವುಳ್ಳ ಕೀಟ್ ನೀಡಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಡಾ.ಮುರಳಿಧರ್, ಡಾ.ತಿಪ್ಪೆಸ್ವಾಮಿ, ಜಿಲ್ಲಾ ಸಲಹೆಗಾರರಾದ ಸತೀಶ್ ಕಲಹಾಳ್, ಸಾಮಾಜಿಕ ಕಾರ್ಯಕರ್ತ ಕೆ.ಇ. ದೇವರಾಜ್ ಉಪಸ್ಥಿತರಿದ್ದರು.