ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-11-2022)

Social Share

ನಿತ್ಯ ನೀತಿ : ನೀವು ಸರಿಯಾದ ಮಾರ್ಗದಲ್ಲಿ ಸಾಗಿದರೆ ಜೀವನವು ನಿಮಗೆ ಅರ್ಹವಾದ ಎಲ್ಲವನ್ನೂ ನೀಡುತ್ತದೆ.
ಪಂಚಾಂಗ : ಮಂಗಳವಾರ, 01-11-2022
ಶುಭಕೃತ್ ನಾಮ ಸಂವತ್ಸರ /ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಶ್ರವಣ / ಮಳೆ ನಕ್ಷತ್ರ: ಸ್ವಾತಿ
ಸೂರ್ಯೋದಯ : ಬೆ.06.13
ಸೂರ್ಯಾಸ್ತ : 05.53
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ಇಂದಿನ ರಾಶಿಭವಿಷ್ಯ :

ಮೇಷ: ಬಹಳ ದಿನಗಳ ನಂತರ ಕಚೇರಿಯ ಕೆಲಸ-ಕಾರ್ಯಗಳಲ್ಲಿ ತೃಪ್ತಿಕರವಾಗಲಿದೆ.
ವೃಷಭ: ಧ್ಯಾನ ಮಾಡುವುದರಿಂದ ಮನಸ್ಸು ನಕಾರಾತ್ಮಕ ಭಾವನೆಯಿಂದ ಹೊರಬರಲಿದೆ.
ಮಿಥುನ: ಅಂದುಕೊಂಡ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ನೆರವೇರಲಿವೆ.

ಕಟಕ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಮಾಡಬೇಕಾದ ಸಂದರ್ಭ ಬರಲಿದೆ.
ಸಿಂಹ: ಸಂಗಾತಿಯೊಂದಿಗೆ ಇದ್ದ ಕೆಲವು ಭಿನ್ನಾಭಿಪ್ರಾಯಗಳು ಬಗೆಹರಿಯಬಹುದು.
ಕನ್ಯಾ: ತಂದೆ-ತಾಯಿಯರ ಹಿತವಚನವನ್ನು ಸಹನೆ ಯಿಂದ ಕೇಳುವುದು ಒಳಿತು.


ತುಲಾ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ. ಇಡೀ ದಿನ ಶುಭವಾಗಿರಲಿದೆ.
ವೃಶ್ಚಿಕ: ಆರ್ಥಿಕ ವಿಚಾರದಲ್ಲಿ ತಕ್ಕಮಟ್ಟಿನ ಸುಧಾರಣೆ ಕಂಡುಕೊಳ್ಳುವಿರಿ.
ಧನುಸ್ಸು: ವಾಹನ ಚಾಲನೆ ಹಾಗೂ ವಾಹನದಲ್ಲಿ ಪ್ರಯಾಣಿಸುವಾಗ ಹೆಚ್ಚು ಜಾಗೃತರಾಗಿರಿ.

ಮಕರ: ವೃತ್ತಿ ಜೀವನದಲ್ಲಿ ಬಹಳಷ್ಟು ಬದಲಾವಣೆ ಗಳಾಗಲಿವೆ. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ.
ಕುಂಭ: ಆಹಾರದಲ್ಲಿನ ಬದಲಾವಣೆಯಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ.
ಮೀನ: ಅತಿಯಾದ ಆಲಸ್ಯ ನಿಮ್ಮ ಕೆಲಸಕ್ಕೆ ಅಡ್ಡಿ ಉಂಟುಮಾಡಲಿದೆ. ದೂರ ಪ್ರಯಾಣ ಬೇಡ.

Articles You Might Like

Share This Article