Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(23-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(23-05-2024)

ನಿತ್ಯ ನೀತಿ : ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ ಕಾಲ ಕೆಡುವುದಿಲ್ಲ. ಕೆಡುವುದು ಜನರ ನಡತೆ ಮತ್ತು ಆಚಾರ-ವಿಚಾರ ಮಾತ್ರ.

ಪಂಚಾಂಗ : ಗುರುವಾರ, 23-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ವಿಶಾಖಾ / ಯೋಗ: ಪರಿಘ / ಕರಣ: ವಿಷ್ಟಿ
ಸೂರ್ಯೋದಯ : ಬೆ.05.53
ಸೂರ್ಯಾಸ್ತ : 06.40
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿಭವಿಷ್ಯ :
ಮೇಷ
: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ವೃಷಭ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಮಿಥುನ: ಕೆಟ್ಟ ಅಭ್ಯಾಸವೊಂದನ್ನು ಬಿಡದ ನಿಮಗೆ ಸಾರ್ವಜನಿಕರಿಂದ ಅವಮಾನವಾಗಲಿದೆ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಹಣಕಾಸಿನ ಸಂಸ್ಥೆಯವರಿಗೆ ಆಧಿ ಕ ಒತ್ತಡ.

ತುಲಾ: ನಿಮ್ಮ ಮಾತೇ ಸರಿ ಎಂಬ ಹಠ ಬಿಟ್ಟು ವಿಶಾಲವಾಗ ಚಿಂತನೆ ಮಾಡುವುದು ಒಳಿತು.
ವೃಶ್ಚಿಕ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.

RELATED ARTICLES

Latest News