ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ : ಪ್ರಚಾರ ಅಬ್ಬರ ಶುರು

ಬೆಂಗಳೂರು,ಏ.4- ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ.ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಇಂದು ಬಹುತೇಕ ಎಲ್ಲಾ ಅಭ್ಯರ್ಥಿಗಳು ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದರು. ರೋಡ್ ಶೋ, ಬಹಿರಂಗ ಸಮಾವೇಶಗಳ ಮೂಲಕ ಚುನಾವಣೆಯ ಕಣ ರಂಗೇರಿತ್ತು. ಕೊನೆ ದಿನವಾದ್ದರಿಂದ ನಾಮಪತ್ರಗಳ ಸಲ್ಲಿಕೆಗಳ ಭರಾಟೆಯೂ ಜೋರಾಗಿತ್ತು. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, … Continue reading ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ : ಪ್ರಚಾರ ಅಬ್ಬರ ಶುರು