Tuesday, October 8, 2024
Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-10-2024)

ನಿತ್ಯ ನೀತಿ : ನೀವು ಬೇರೆಯವರಿಗಾಗಿ ಒಂದು ದೀಪ ಹಚ್ಚಿ. ಅದು ನಿಮ್ಮ ದಾರಿಗೂ ಬೆಳಕಾಗುತ್ತದೆ.

ಪಂಚಾಂಗ ಮಂಗಳವಾರ 08-10-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಶರದ್‌ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ
ತಿಥಿ: ಪಂಚಮಿ / ನಕ್ಷತ್ರ: ಜ್ಯೇಷ್ಠಾ / ಯೋಗ: ಆಯುಷ್ಮಾನ್‌ / ಕರಣ: ಕೌಲವ

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.05
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಹಿರಿಯ ವಿದ್ವಾಂಸರಿಗೆ ಗೌರವ ಸಿಗುತ್ತದೆ. ನಿರೀಕ್ಷಿತ ಮಟ್ಟಕ್ಕಿಂತ ಆದಾಯ ಹೆಚ್ಚಿರುತ್ತದೆ.
ವೃಷಭ: ಹಿರಿಯ ನಾಗರಿಕರಿಗೆ ಸರ್ಕಾರಿ ನೆರವು. ಮಕ್ಕಳ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಮಿಥುನ: ಸ್ವಂತ ಉದ್ಯೋಗ ಮಾಡುವವರಿಗೆ ಲಾಭ ಹೆಚ್ಚುತ್ತದೆ. ಆತ್ಮಗೌರವಕ್ಕೆ ಹೆಚ್ಚು ಬೆಲೆ ಕೊಡುವಿರಿ.

ಕಟಕ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ಸಿಂಹ: ಮಕ್ಕಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಲಾಭ.
ಕನ್ಯಾ: ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು. ಭಜನೆಯಿಂದ ನೆಮ್ಮದಿ ಸಿಗಲಿದೆ.

ತುಲಾ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.
ವೃಶ್ಚಿಕ: ಮಕ್ಕಳಿಂದ ಶುಭವಾರ್ತೆ ಕೇಳುವಿರಿ. ಹೊಸ ಹೊಸ ಅವಕಾಶಗಳು ಒದಗಿ ಬರಲಿವೆ.
ಧನುಸ್ಸು: ನಿಮ್ಮ ಮೇಲಿದ್ದ ಆಪಾದನೆಗಳು ದೂರಾಗಿ ಮೇಲಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.

ಮಕರ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.
ಕುಂಭ: ಇತರರೊಂದಿಗೆ ಸೇರಿ ಮಾಡುವ ಕೆಲಸ- ಕಾರ್ಯಗಳಲ್ಲಿ ಉತ್ತಮ ಲಾಭ ದೊರೆಯಲಿದೆ.
ಮೀನ: ಹಣಕಾಸಿನ ವ್ಯತ್ಯಾಸಗಳಾಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ.

RELATED ARTICLES

Latest News