ನಿತ್ಯ ನೀತಿ: ಒಳ್ಳೆಯ ಆಲೋಚನೆ (ಬುದ್ಧಿಶಕ್ತಿ) ಹೊಂದಿರುವ ವ್ಯಕ್ತಿ ಯಾವಾಗಲೂ ಅವಕಾಶವನ್ನು ಹುಡುಕುತ್ತಿರುತ್ತಾನೆ. ಆದರೆ, ಅದೇ ಒಬ್ಬ ದುರಾಲೋಚನೆ ಹೊಂದಿರುವ ವ್ಯಕ್ತಿ ಯಾವಾಗಲೂ ಮತ್ತೊಬ್ಬರ ತಪ್ಪುಗಳನ್ನೇ ಹುಡುಕುತ್ತಿರುತ್ತಾನೆ.
ಪಂಚಾಂಗ ಗುರುವಾರ 01-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಪೂರ್ವಾಭಾದ್ರ / ಮಳೆ ನಕ್ಷತ್ರ: ಅನುರಾಧ
ಸೂರ್ಯೋದಯ : ಬೆ.06.26
ಸೂರ್ಯಾಸ್ತ : 05.51
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30
ರಾಶಿ ಭವಿಷ್ಯ
ಮೇಷ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.
ವೃಷಭ: ನಿಮ್ಮ ವರ್ಚಸ್ಸಿನ ಪ್ರಭಾವದಿಂದ ವಿನೂತನವಾದ ಅವಕಾಶಗಳು ದೊರೆಯಲಿವೆ.
ಮಿಥುನ:ಮಾನಸಿಕ ಧೈರ್ಯ, ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಧ್ಯಾನ ಮಾಡುವುದು ಒಳಿತು.
ಕಟಕ: ಅನವಶ್ಯಕ ಗೊಂದಲಗಳನ್ನು ಮೈಮೇಲೆ ಎಳದುಕೊಳ್ಳದಿರಿ. ಸ್ನೇಹಿತರನ್ನು ನಂಬಿ.
ಸಿಂಹ: ಲೇವಾದೇವಿ ವ್ಯವಹಾರ ನಡೆಸುವುದು ಸರಿಯಲ್ಲ. ಸೋಮಾರಿತನ ಶತ್ರುವಾಗಿ ಪರಿಣಮಿಸಲಿದೆ.
ಕನ್ಯಾ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.
ತುಲಾ: ಹತ್ತಿರದ ಸ್ನೇಹಿತ ರಿಂದಲೇ ನಿಮ್ಮ ಬಗ್ಗೆ ಕೆಟ್ಟ ಮಾತುಗಳು ಕೇಳಿಬರಲಿವೆ.
ವೃಶ್ಚಿಕ: ಉತ್ತಮ ಅವಕಾಶಗಳು ಸಿಗುವುದರಿಂದ ಆತ್ಮಗೌರವ ಹೆಚ್ಚಾಗಲಿದೆ.
ಧನುಸ್ಸು: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಮಕರ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಕುಂಭ: ಕುಟುಂಬ ಕಲಹ ಉಂಟಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರಿಕೆಯಿಂದ ಮಾತನಾಡಿ.
ಮೀನ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
#DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,