ನಿತ್ಯ ನೀತಿ: ಪ್ರಾಮಾಣಿಕವಾಗಿ ಮಾಡುವ ಕೆಲಸ ಯಾವುದಾದರೇನು? ಅದು ನಮಗೆ ಒಂದು ತುತ್ತು ಅನ್ನ ಕೊಡುತ್ತಿದ್ದರೆ ಅದರ ಮೇಲೆ ಗೌರವವಿರಲಿ.
ಪಂಚಾಂಗ ಮಂಗಳವಾರ 02-01-2024
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಸೌಭಾಗ್ಯ / ಕರಣ: ವಿಷ್ಠಿ
ಸೂರ್ಯೋದಯ ; ಬೆ.06.42
ಸೂರ್ಯಾಸ್ತ : 06.05
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30
ರಾಶಿ ಭವಿಷ್ಯ
ಮೇಷ: ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಷಭ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಮಿಥುನ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಕಟಕ: ಹಲವು ವಿಷಯಗಳ ಬಗ್ಗೆ ಜನರು ನಿಮ್ಮಿಂದ ಸಲಹೆ-ಸೂಚನೆಗಳನ್ನು ಪಡೆಯುವರು.
ಸಿಂಹ: ಹಣಕಾಸು ವಿಚಾರ ದಲ್ಲಿ ದೃಢ ನಿರ್ಧಾರ ಕೈಗೊಳ್ಳುವುದು ಒಳಿತು.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.
ತುಲಾ: ಹಿರಿಯ ಅಧಿಕಾರಿಗಳ ಆಕಸ್ಮಿಕ ಭೇಟಿಯಿಂದಾಗಿ ಉದ್ಯೋಗ ಪ್ರಾಪ್ತಿಯಾಗಲಿದೆ.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು: ಬಂಧುಗಳಲ್ಲಿ ವಿಶ್ವಾಸ, ಸಂಬಂಧ ಬೆಳೆಸಿಕೊಳ್ಳುವತ್ತ ಪ್ರಯತ್ನಿಸಿ.
ಮಕರ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಕುಂಭ: ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.
ಮೀನ: ತಂದೆಯ ಆರೋಗ್ಯದಲ್ಲಿ ಕೊಂಚ ಏರುಪೇರಾಗಬಹುದು. ಜಾಗ್ರತೆ ವಹಿಸಬೇಕು.