Thursday, May 9, 2024
Homeರಾಷ್ಟ್ರೀಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-02-2024)

ನಿತ್ಯ ನೀತಿ : ಬದುಕು ಅನ್ನೋದು ನದಿಯ ಹಾಗೆ. ಕೊನೆಯಿಲ್ಲದ ಪಯಣ. ಯಾವುದೂ ನಮ್ಮ ಜತೆ ಉಳಿಯುವುದಿಲ್ಲ. ಉಳಿಯುವುದು ಒಂದೇ. ಹೃದಯಕ್ಕೆ ತಟ್ಟಿದ ನೆನಪು ಮಾತ್ರ.

ಪಂಚಾಂಗ ಶುಕ್ರವಾರ 02-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಸ್ವಾತಿ / ಯೋಗ: ಶೂಲ / ಕರಣ: ಬಾಲವ

ಸೂರ್ಯೋದಯ : ಬೆ.06.46
ಸೂರ್ಯಾಸ್ತ : 06.21
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಹಣಕಾಸಿನ ಸಂಸ್ಥೆಯವರಿಗೆ ಆಧಿಕ ಒತ್ತಡ.
ವೃಶ್ಚಿಕ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.

RELATED ARTICLES

Latest News