ನಿತ್ಯ ನೀತಿ : ನಾವು ಭೇಟಿಯಾಗುವ ಪ್ರತಿಯೊಬ್ಬರಿಗೂ ನಮಗೆ ಗೊತ್ತಿರದ ಸಂಗತಿಯೊಂದು ಗೊತ್ತಿರಬಹುದು. ಆದ್ದರಿಂದ ಬೇರೆಯವರೊಡನೆ ಬೆರೆಯೋಣ. ಹೊಸ ವಿಷಯ ಕಲಿಯೋಣ.
ಪಂಚಾಂಗ ಶನಿವಾರ 02-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ವಿಶಾಖಾ / ಯೋಗ: ವ್ಯಾಘಾತ / ಕರಣ: ವಿಷ್ಟಿ
ಸೂರ್ಯೋದಯ : ಬೆ.06.35
ಸೂರ್ಯಾಸ್ತ : 06.29
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ ; 6.00-7.30
ರಾಶಿ ಭವಿಷ್ಯ
ಮೇಷ: ಮಿತ್ರರಲ್ಲಿ ಕಂಡುಬರುವ ಭಿನ್ನಾಭಿಪ್ರಾಯ ಹೋಗಲಾಡಿಸಲು ಯತ್ನಿಸುವಿರಿ.
ವೃಷಭ: ಸಮಯವನ್ನು ಸರಿಯಾಗಿ ಬಳಸಿಕೊಂಡು ಬುದ್ಧಿವಂತಿಕೆಯಿಂದ ಹಣ ಹೂಡಿಕೆ ಮಾಡಬೇಕಾಗುತ್ತದೆ.
ಮಿಥುನ: ವ್ಯವಹಾರ ಸಂಬಂಧಿ ಮಾತುಗಳು ಇಂದು ಫಲ ನೀಡಲಿವೆ.
ಕಟಕ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.
ಸಿಂಹ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆ ಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಿರಿ.
ಕನ್ಯಾ: ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.
ತುಲಾ: ಮಕ್ಕಳಿಗೆ ಹಿಂದೆ ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳಲು ನೀವು ಶಕ್ತಿರಾಗಿರುವಿರಿ.
ವೃಶ್ಚಿಕ: ಮಗಳ ಮದುವೆಯ ಕಾರ್ಯಕಲಾಪಗಳು ಸುಗವಾಗಿ ಸಾಗುವುದರಿಂದ ನೆಮ್ಮದಿ ಇರಲಿದೆ.
ಧನುಸ್ಸು: ನೀವು ಯೋಚಿಸಿದಂತೆಯೇ ಸನ್ನಿವೇಶಗಳು ಎದುರಾಗಿ ಅಚ್ಚರಿ ಮೂಡಿಸಲಿವೆ.
ಮಕರ: ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸಿ. ಅನಗತ್ಯ ಚರ್ಚೆ ಬೇಡ.
ಕುಂಭ: ತುರ್ತು ವಿಷಯಗಳ ಬಗ್ಗೆ ಹೆಚ್ಚಾಗಿ ಗಮನ ಹರಿಸಿ. ಕೌಟುಂಬಿಕ ಸಂಬಂಧಗಳು ಗಟ್ಟಿಗೊಳ್ಳಲಿವೆ.
ಮೀನ: ಹಲವು ದಿನಗಳಿಂದ ಬರಬೇಕಾಗಿರುವ ಹಣ ಸಂಜೆ ವೇಳೆಗೆ ಕೈ ಸೇರುವುದು.