ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(02-12-2022)

Social Share

ನಿತ್ಯ ನೀತಿ: ಸಂಬಂಧಗಳು ಮುರಿಯಲು ಸಂಬಂಧಿಸಿದವರ ವರ್ತನೆ, ಅಹಂಕಾರ, ನಿರ್ಲಕ್ಷ್ಯತನವೇ ಕಾರಣ.

ಪಂಚಾಂಗ ಶುಕ್ರವಾರ 02-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಉತ್ತರಾಭಾದ್ರ / ಮಳೆ ನಕ್ಷತ್ರ: ಅನುರಾಧ

ಸೂರ್ಯೋದಯ : ಬೆ.06.26
ಸೂರ್ಯಾಸ್ತ ; 05.51
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ವೃಷಭ: ಸೌಜನ್ಯತೆಯಿಂದ ನಡೆದುಕೊಳ್ಳುವುದರಿಂದ ನೆರೆಹೊರೆಯವರು ನಿಮಗೆ ಸ್ಪಂದಿಸುವರು.
ಮಿಥುನ: ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಕಟಕ: ವ್ಯವಹಾರದಲ್ಲಿ ಮೂರನೆ ವ್ಯಕ್ತಿಯೊಬ್ಬರ ಆಗಮನವಾಗುವುದರಿಂದ ಅಪಾಯ ಹೆಚ್ಚಾಗಲಿದೆ.
ಸಿಂಹ: ವಿಲಾಸಿ ವಸ್ತುಗಳ ಖರೀದಿಗೆ ಮುಂದಾಗುವಿರಿ. ಹೊಟೇಲ್ ವ್ಯಾಪಾರಿಗಳಿಗೆ ನಷ್ಟವಾಗಲಿದೆ.
ಕನ್ಯಾ: ಹೊಸ ಕೆಲಸ ಆರಂಭಿ ಸಲು ಕುಟುಂಬ ದವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದು ಒಳಿತು.

ತುಲಾ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.
ವೃಶ್ಚಿಕ :ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ಧನುಸ್ಸು: ಮನೆಗಾಗಿ ವಿಶೇಷ ವಸ್ತುಗಳನ್ನು ಖರೀದಿಸಲು ಉತ್ಸುಕರಾಗಿರುವಿರಿ.

ಮಕರ: ಜವಾಬ್ದಾರಿ ನಿಭಾಯಿಸುವಲ್ಲಿ ಯಶಸ್ವಿ ಯಾಗುವಿರಿ. ಚಿಂತೆಗೆ ಅವಕಾಶವಿರುವುದಿಲ್ಲ.
ಕುಂಭ: ಲೇವಾದೇವಿ ವ್ಯವಹಾರಗಳು ನಿರಂತರವಾಗಿ ಮುಂದುವರೆಯಲಿವೆ.
ಮೀನ: ದೂರ ಪ್ರಯಾಣದಿಂದ ಮನಸ್ಸಿಗೆ ನೆಮ್ಮದಿ ಸಿಗಬಹುದು. ಮಕ್ಕಳಿಂದ ಸಂತೋಷ ಸಿಗಲಿದೆ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article