ನಿತ್ಯ ನೀತಿ: ಒಳ್ಳೆಯದು ಸಂಭವಿಸುತ್ತದೆ ಎಂದು ನೀವು ಕಾಯದಿದ್ದರೆ ದುಃಖಿತರಾಗಿಯೇ ಇರಬೇಕಾಗುತ್ತದೆ.
ಪಂಚಾಂಗ ಶನಿವಾರ 03-12-2022
ಶುಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ರೇವತಿ / ಮಳೆ ನಕ್ಷತ್ರ: ಜ್ಯೇಷ್ಠ
ಸೂರ್ಯೋದಯ: ಬೆ.06.26
ಸೂರ್ಯಾಸ್ತ : 05.51
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00
ರಾಶಿ ಭವಿಷ್ಯ
ಮೇಷ: ಶುಭ ಸಮಾರಂಭಗಳು ನಡೆಯುವುದರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ವೃಷಭ: ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.
ಮಿಥುನ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ಕಟಕ: ಕಚೇರಿಯಲ್ಲಿ ಮಹಿಳಾ ಉದ್ಯಮಿಗಳಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಜಾಗ್ರತೆ.
ಸಿಂಹ: ಉದ್ಯೋಗ ಸ್ಥಳದಲ್ಲಿ ನಡೆಯುವ ಎಲ್ಲ ವಿಷಯಗಳನ್ನು ಗಂಭೀರ ವಾಗಿ ಪರಿಗಣಿಸದಿರಿ.
ಕನ್ಯಾ: ಲೇವಾದೇವಿ ವ್ಯವಹಾರ ನಡೆಸುವುದು ಸರಿಯಲ್ಲ. ಸೋಮಾರಿತನ ಶತ್ರುವಾಗಿ ಪರಿಣಮಿಸಲಿದೆ.
ತುಲಾ: ಧಾರ್ಮಿಕ ಕಾರ್ಯ ಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.
ವೃಶ್ಚಿಕ: ಪೊಲೀಸ್ ಅಧಿಕಾರಿಗಳ ಜವಾಬ್ದಾರಿ ಕಡಿಮೆಯಾಗಲಿದೆ. ಕುಲದೇವರನ್ನು ಪ್ರಾರ್ಥಿಸಿ.
ಧನುಸ್ಸು: ಹಿಂಜರಿಕೆ ಮತ್ತು ಭಯದ ಸ್ವಭಾವ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಮಕರ: ಸೌಜನ್ಯತೆಯಿಂದ ನಡೆದುಕೊಳ್ಳುವುದ ರಿಂದ ನೆರೆಹೊರೆಯವರು ನಿಮಗೆ ಸ್ಪಂದಿಸುವರು.
ಕುಂಭ: ಅನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.
DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,