ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(05-12-2022)

Social Share

ನಿತ್ಯ ನೀತಿ: ಉಪದೇಶ ಮಾಡಬೇಡಿ. ನೀವೇನು ಹೇಳಬೇಕೆಂದಿದ್ದೀರೋ ಹಾಗೆ ಬದುಕಿ ತೋರಿಸಿ.

ಪಂಚಾಂಗ ಸೋಮವಾರ 05-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಅಶ್ವಿನಿ / ಮಳೆ ನಕ್ಷತ್ರ: ಜ್ಯೇಷ್ಠ

ಸೂರ್ಯೋದಯ ; ಬೆ.06.28
ಸೂರ್ಯಾಸ್ತ : 05.52
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ಕೆಲ ದಿನಗಳಿಂದ ನೆನೆಗುದಿಗೆ ಬಿದ್ದ ಕಾರ್ಯಗಳಿಗೆ ಮತ್ತೊಮ್ಮೆ ವಿಘ್ನ ಎದುರಾಗಬಹುದು.
ವೃಷಭ: ವ್ಯವಹಾರಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಹೆಚ್ಚಿನ ಸಲಹೆ ಪಡೆಯಿರಿ.
ಮಿಥುನ: ಪ್ರಾಮಾಣಿಕತೆಯಿಂದ ದುಡಿಯುವ ನಿಮ್ಮ ಮೇಲೆ ಮೇಲಧಿಕಾರಿಗಳಿಗೆ ಭರವಸೆ ಮೂಡಲಿದೆ.

ಕಟಕ: ಕೆಲವು ಯೋಜನೆಗಳ ಬಗ್ಗೆ ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ನೆರೆಹೊರೆಯವರ ಸಲಹೆ ಪಡೆಯಿರಿ.
ಸಿಂಹ: ಸಂಪನ್ಮೂಲ ವೃದ್ಧಿ ಗಾಗಿ ಹೊಸ ಮಾರ್ಗ ಕಂಡು ಕೊಳ್ಳುವಲ್ಲಿ ಯಶಸ್ಸು ಸಿಗಲಿದೆ.
ಕನ್ಯಾ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.

ತುಲಾ: ಶುಭ ಸಮಾರಂಭಗಳು ನಡೆಯುವುದರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ವೃಶ್ಚಿಕ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಧನುಸ್ಸು: ಮೇಲಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸುವುದರಿಂದ ತೊಂದರೆಯಾಗಲಿದೆ.

ಮಕರ: ಅಪರಿಚಿತರೊಂದಿಗೆ ಹಣಕಾಸಿನ ವ್ಯವಹಾರ ಮಾಡದಿರಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಕುಂಭ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಮೀನ: ಎಲ್ಲ ಕೆಲಸ-ಕಾರ್ಯಗಳಿಗೂ ವಿರಾಮ ಹೇಳಿ ಪತ್ನಿ-ಮಕ್ಕಳೊಂದಿಗೆ ಸಮಯ ಕಳೆಯಿರಿ.

DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,

Articles You Might Like

Share This Article