ನಿತ್ಯ ನೀತಿ: ಕಷ್ಟದಲ್ಲಿ ನಾ ನಿನ್ನ ಧ್ಯಾನ ಮಾಡುವೆ. ಸುಖದಲ್ಲಿ ಮರೆಯದೆ ನಿನ್ನ ಪೂಜಿಸುವೆ. ಸುಖ ನೀ ಕೊಟ್ಟ ಭಿಕ್ಷೆ, ಕಷ್ಟ ನೀ ಕೊಟ್ಟ ಪರೀಕ್ಷೆ. ನೀ ನೀಡಿದ ಪರೀಕ್ಷೆಯಲ್ಲಿ ಗೆದ್ದು ಬರಲು ಹರಸು ನನ್ನ ದೇವಾ…
ಪಂಚಾಂಗ ಶನಿವಾರ 06-08-2022
ಶುಭಕೃತ್ ನಾಮ ಸಂವತ್ಸರ /ದಕ್ಷಿಣಾಯನ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ವಿಶಾಖಾ
ಮಳೆ ನಕ್ಷತ್ರ: ಆಶ್ಲೇಷ
ಸೂರ್ಯೋದಯ: ಬೆ.06.06
ಸೂರ್ಯಾಸ್ತ: 06.45
ರಾಹುಕಾಲ: 9.00-10.30
ಯಮಗಂಡ ಕಾಲ: 1.30-3.00
ಗುಳಿಕ ಕಾಲ: 6.00-7.30
ರಾಶಿ ಭವಿಷ್ಯ
ಮೇಷ: ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ವೃಷಭ: ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಪರಿಹಾರವಾಗಬಹುದು.
ಮಿಥುನ: ಧರ್ಮ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ.
ಕಟಕ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಸಿಂಹ: ರಿಯಲ್ ಎಸ್ಟೇಟ್‍ಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.
ಕನ್ಯಾ: ಸ್ತ್ರೀಯರಿಂದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆಗಳಿವೆ.
ತುಲಾ: ಉನ್ನತ ವಿದ್ಯಾ ಭ್ಯಾಸಕ್ಕಾಗಿ ದೂರ ಪ್ರಯಾಣ ಮಾಡಬೇಕಾಗಬಹುದು.
ವೃಶ್ಚಿಕ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಉತ್ತಮ.
ಧನುಸ್ಸು: ನೀವು ಮಾತನಾಡುವ ರೀತಿಯಿಂದಾಗಿ ಬೇರೆಯವರಿಗೆ ನೋವಾಗಬಹುದು.
ಮಕರ: ದೂರದ ಬಂಧುಗಳ ಆಗಮನವಾಗಲಿದೆ. ನೆರೆಹೊರೆಯವರು ನಿಮ್ಮ ನೆರವಿಗೆ ಬರುವರು.
ಕುಂಭ: ಗಣ್ಯ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ದೂರ ಪ್ರಯಾಣ.
ಮೀನ: ಯಾವುದೇ ಕೆಲಸ ಮಾಡುವಾಗ ಹಿರಿಯರ ಸಲಹೆ-ಸೂಚನೆಗಳನ್ನು ಪಡೆಯುವುದು ಒಳಿತು.