ನಿತ್ಯ ನೀತಿ : ಮನೆ ಕಟ್ಟುವಾಗ ಯಾರೂ ಬಂದು ಸಹಾಯ ಮಾಡುವುದಿಲ್ಲ. ನಂತರ ಗೃಹ ಪ್ರವೇಶಕ್ಕೆ ಎಲ್ಲರೂ ಬಂದು ಹಾರೈಸಿ ಉಡುಗೊರೆ ಕೊಡುತ್ತಾರೆ. ಹಾಗೆಯೇ ಜೀವನದಲ್ಲಿ ನಾವು ಸಾಧನೆ ಮಾಡಲು ಹೊರಟಾಗ ಯಾರೂ ಸಹಾಯ ಮಾಡುವುದಿಲ್ಲ. ನಂತರ ಗುರಿ ತಲುಪಿದ ಮೇಲೆ ಎಲ್ಲರೂ ಬಂದು ಹಾರೈಸುತ್ತಾರೆ. ಇದೇ ನಿಜವಾದ ಪ್ರಪಂಚ.
ಪಂಚಾಂಗ ಭಾನುವಾರ 08-01-2023
ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು /ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಪುಷ್ಯ / ಯೋಗ: ವೈಧೃತಿ / ಕರಣ: ತೈತಿಲ
ಸೂರ್ಯೋದಯ : ಬೆ.06.44
ಸೂರ್ಯಾಸ್ತ : 06.08
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30
ರಾಶಿ ಭವಿಷ್ಯ
ಮೇಷ: ಹಿರಿಯ ಅಧಿಕಾರಿಗಳೊಂದಿಗೆ ಸಾಮರಸ್ಯ ಮತ್ತು ಸಂಘಟಿತ ಪ್ರಯತ್ನಗಳನ್ನು ಕಾಪಾಡಿಕೊಳ್ಳಿ.
ವೃಷಭ: ಆಹಾರ ಪದಾರ್ಥಗಳನ್ನು ಮಾರುವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ.
ಮಿಥುನ: ಸ್ನೇಹಿತರ ಸಹಾಯದಿಂದ ನಿಮ್ಮ ಕೆಲಸ-ಕಾರ್ಯಗಳಲ್ಲಿ ಯಶಸ್ಸಿ ದೊರೆಯಲಿದೆ.
ಕಟಕ: ಅತಿಯಾದ ಒರಟುತನ ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವುದು. ಯಾರನ್ನಾದರೂ ನಂಬಿ ಹಣ ಹೂಡುವ ಮುನ್ನ ಯೋಚಿಸಿ.
ಸಿಂಹ: ನಿಮ್ಮ ಸಮಸ್ಯೆಗಳನ್ನು ನ್ಯಾಯಯುತವಾಗಿ ಹಾಗೂ ಸೌಹಾರ್ದಯುತವಾಗಿ ಬಗೆ ಹರಿಸಿಕೊಳ್ಳುವುದು ಒಳಿತು.
ಕನ್ಯಾ: ರಫ್ತು, ಆಮದು ವ್ಯವಹಾರದಲ್ಲಿ ಉತ್ತಮ ಅವಕಾಶಗಳು ಸಿಗಲಿವೆ. ಅವಿವಾಹಿತರಿಗೆ ವಿವಾಹ ಯೋಗ.
ತುಲಾ: ಹಣಕಾಸಿನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು.
ವೃಶ್ಚಿಕ: ವಿದ್ಯಾರ್ಥಿಗಳು ಹೆಚ್ಚು ಶ್ರಮ ವಹಿಸ ಬೇಕಾದ ಅಗತ್ಯವಿದೆ. ಪಿತ್ರಾರ್ಜಿತ ಆಸ್ತಿ ಸಿಗಲಿದೆ.
ಧನುಸ್ಸು: ಸಮೀಪವರ್ತಿಗಳಿಂದ ಮೋಸ ಹೋಗುವ ಸಾಧ್ಯತೆಗಳಿವೆ. ಎಚ್ಚರ ವಹಿಸಿ.
ಮಕರ: ಕಠಿಣ ನಿರ್ಧಾರ ಕೈಗೊಳ್ಳುವ ಪ್ರಸಂಗ ಬರಬಹುದು. ಇದಕ್ಕಾಗಿ ವಿಚಲಿತರಾಗಬೇಕಿಲ್ಲ.
ಕುಂಭ: ರಾಜಕೀಯ ವ್ಯಕ್ತಿಗಳು ವೈಯಕ್ತಿಕ ಅನುಕೂಲಕ್ಕಾಗಿ ಶ್ರಮ ಪಡುವರು.
ಮೀನ: ಜಟಿಲ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸೂಕ್ತ ಮಾರ್ಗದರ್ಶಕರನ್ನು ಹುಡುಕುವಿರಿ.