Sunday, May 19, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-01-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-01-2024)

ನಿತ್ಯ ನೀತಿ : ಯೋಚಿಸಿದ್ದೆಲ್ಲ ಸತ್ಯ ಅಲ್ಲ. ಸತ್ಯ ಯಾವತ್ತೂ ಯೋಚಿಸಿದಂತೆ ಇರುವುದಿಲ್ಲ. ಅನುಭವ ಮಾತ್ರ ಯಾವಾಗಲೂ ಸತ್ಯ. ಮಿಥ್ಯ.

ಪಂಚಾಂಗ ಸೋಮವಾರ 08-01-2024
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಅನುರಾಧಾ / ಯೋಗ: ಗಂಡ / ಕರಣ: ಕೌಲವ

ಸೂರ್ಯೋದಯ : ಬೆ.06.44
ಸೂರ್ಯಾಸ್ತ : 06.08
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು. ಸಂಗಾತಿಯೊಂದಿಗೆ ಪ್ರವಾಸ ಕೈಗೊಳ್ಳುವಿರಿ.
ವೃಷಭ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳು ವಲ್ಲಿ ವಿಫಲವಾದರೆ ತೊಂದರೆ ಎದುರಿಸಬೇಕಾಗುತ್ತದೆ.
ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ.

ಕಟಕ: ರಕ್ತ ಸಂಬಂಧಿಗಳ ವಿರೋಧ ಎದುರಿಸ ಬೇಕಾಗುತ್ತದೆ.
ಸಿಂಹ: ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಬೆಳೆಯುವ ನಿಮಗೆ ಸಂತೃಪ್ತಿಯ ದಿನ.
ಕನ್ಯಾ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.

ತುಲಾ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಬೇಡ.
ವೃಶ್ಚಿಕ: ವಿವಿಧ ಕ್ಷೇತ್ರ ಗಳಲ್ಲಿ ಅನೇಕ ರೀತಿಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ಧನುಸ್ಸು: ಪೂರ್ವಜರ ಆಸ್ತಿಯಿಂದ ಲಾಭ ಸಿಗಲಿದೆ. ಕಿರಿಯ ಸಹೋದ್ಯೋಗಿಗಳಿಗೆ ಸಹಾಯ ಮಾಡುವಿರಿ.

ಮಕರ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.
ಕುಂಭ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.
ಮೀನ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.

RELATED ARTICLES

Latest News